ಪಿರಿಯಾಪಟ್ಟಣ: ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನ.6ರ ಭಾನುವಾರದಂದು ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲಾ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ತಿಳಿಸಿದ್ದಾರೆ.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.6 ರಂದು ಕೌಲನಹಳ್ಳಿ ಸೋಮಶೇಖರ್ ಸ್ನೇಹ ಬಳಗದ ನೇತೃತ್ವದಲ್ಲಿ ಮೈಸೂರು ಮಣಿಪಾಲ್ ಆಸ್ಪತ್ರೆ, ಜಿಲ್ಲಾ ಸಂಚಾರಿ ನೇತ್ರಾ ಚಿಕಿತ್ಸಾ ಘಟಕ, ಲಯನ್ ಬ್ಲಡ್ ಸೆಂಟರ್ ಜೀವಧಾರ ಹಾಗೂ ಆರೋಗ್ಯ ಭಾರತಿ ಇವರ ಸಂಯುಕ್ತಾಶ್ರಯದಲ್ಲಿ ಶಿಬಿರವನ್ನು ಬೆಂಗಳೂರು ಸುಬ್ಬಣ್ಣನವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9 ರಿಂದ ಮದ್ಯಾಹ್ನ 2 ರವರೆಗೆ ಶಿಬಿರದಲ್ಲಿ ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಹೃದಯಕ್ಕೆ ಸಂಬಂಧಿಸಿದ ಇಸಿಜಿ ಮತ್ತು ಎಕೋ ಟೆಸ್ಟ್, ಕಣ್ಣು, ಮೂಗು, ಕಿವಿ, ಗಂಟಲು ಮತ್ತು ಮಂಡಿನೋವುಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಲು ನುರಿತ ವೈದ್ಯರು ಮತ್ತು ಸಿಬ್ಬಂದಿ ತಂಡ ಭಾಗವಹಿಸಲಿದೆ. ಹೀಗಾಗಿ ತಾಲೂಕಿನ ನಾಗರಿಕರು ಶಿಬಿರದ ಲಾಭ ಪಡೆದುಕೊಳ್ಳುವಂತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಎಸ್.ಜವರಪ್ಪ, ಯಾದವಚಾರ್ ಇದ್ದರು.