NEWSನಮ್ಮಜಿಲ್ಲೆನಮ್ಮರಾಜ್ಯ

“ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ದಯೆ ತೋರದ ಪೊಲೀಸರು : ಎಚ್‌ಡಿಕೆ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನಗರದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಬೈಕ್‌ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು ಎಂದು ತಿಳಿಸಿದ್ದಾರೆ.

ಇನ್ನು ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಕಿಡಿಕಾರಿದ್ದಾರೆ.

ಹಣವಿಲ್ಲದೇ ದಂಪತಿ ರಸ್ತೆಯಲ್ಲೇ ಪರದಾಡಿದ್ದಾರೆ. ಆ ಮಗುವಿನ ತಂದೆ ಹಣಕ್ಕಾಗಿ ಒದ್ದಾಡಿದ್ದಾರೆ, ಆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ರಸ್ತೆ ನಡುವೆಯೇ ಮಡಿಲಲ್ಲಿಟ್ಟುಕೊಂಡು ಅನುಭವಿಸಿದ ವೇದನೆ ಸರಕಾರದ ಕೆಟ್ಟ ಆಡಳಿತಕ್ಕೆ ಹಿಡಿದ ಕನ್ನಡಿ, ಮನುಷ್ಯತ್ವ ಸತ್ತ ಸರಕಾರದ ಇನ್ನೊಂದು ಕರಾಳಮುಖ ಎನ್ನದೇ ವಿಧಿ ಇಲ್ಲ ಎಂದು ಛೇಡಿಸಿದ್ದಾರೆ.

ಆ ಮಗುವಿನ ತಂದೆ ಕೊನೆಗೂ ಗೆಳೆಯರೊಬ್ಬರಿಂದ ಹಣ ಪಡೆದು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟು ಕಳಿಸಿದ್ದಾರೆ. ಬದಲಿಗೆ ದಂಡದ ರಸೀತಿ ಕೊಟ್ಟು, ಆ ನಂತರ ದಂಡ ಕಟ್ಟಿ ಎಂದು ಪೊಲೀಸರು ಹೇಳಬಹುದಿತ್ತು. ಹಾಗೆ ಮಾಡದೇ ದಂಡಪ್ರಯೋಗದ ಹೆಸರಿನಲ್ಲಿ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಕೂಡಲೇ ಆ ಪೊಲೀಸ್ ಸಿಬ್ಬಂದಿಯ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ವಹಿಸಬೇಕು ಹಾಗೂ ಇಂಥ ಮನಃಸ್ಥಿತಿಯ ಪೊಲೀಸ್ ಸಿಬ್ಬಂದಿಯ ಮನಃಪರಿವರ್ತನೆ ಮಾಡಬೇಕು. ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಮುತುವರ್ಜಿ, ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ಗೃಹ ಸಚಿವರು ಈ ಬಗ್ಗೆ ಜನರಿಗೆ ಉತ್ತರ ನೀಡಬೇಕಲ್ಲದೆ, ನೊಂದ ದಂಪತಿಗೆ ಸಾಂತ್ವನ ಹೇಳಲೇಬೇಕು. ಇಂಥ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡಲು ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ