Thursday, October 31, 2024
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಚಾಲಕನ ದಿಕ್ಕುತಪ್ಪಿಸಿದ ವಿದ್ಯಾರ್ಥಿ- ನಿಲ್ದಾಣದಲ್ಲಿಯೇ ನಿರ್ವಾಹಕನ ಬಿಟ್ಟು 15ಕಿಮೀ ಕ್ರಮಿಸಿದ ಬಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪುತ್ತೂರು: ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್‌ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್‌ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್‌ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್‌ ಚಲಾಯಿಸಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್‌.ಟಿ.ಸಿ. ಬಸ್‌ನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್‌ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್‌ನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್‌ .ಟಿ.ಸಿ. ಬಸ್‌ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್‌ ನ್ನು ಸೇರಿಕೊಂಡಿದ್ದಾರೆ.

ಚಾಲಕ ಮತ್ತು ನಿರ್ವಾಹಕರ ದಿಕ್ಕು ತಪ್ಪಿಸಿದ ವಿದ್ಯಾರ್ಥಿಯ ನಡೆಯಿಂದ ಸುಮಾರು 15 ನಿಮಿಷ ಬಸ್‌ ಸಂಚಾರ ತಡವಾಯಿತು. ಇದರಿಂದ ಪ್ರಯಾಣಿಕರು ವಿದ್ಯಾರ್ಥಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...