Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

ಬಾಣಂತಿ, ನವಜಾತ ಶಿಶುಗಳ ಸಾವಿನ ಬಳಿಕ ಎಚ್ಚೆತ್ತ ಇಲಾಖೆ : ತುರ್ತು ಆರೋಗ್ಯ ಸೇವೆಗೆ ಯಾವುದೇ ದಾಖಲೆಗಳ ಅವಶ್ಯವಿಲ್ಲ – ಹೊಸ ಮಾರ್ಗಸೂಚಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ. ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗ ಸೂಚಿ ನೀಡಿದೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಈ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೀಗಾಗಿ ಇನ್ನು ಮುಂದೆ ಈ ಮಾರ್ಗಸೂಚಿಯಂತೆ ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅವಶ್ಯವಿರುವುದಿಲ್ಲ ಎಂದು ತಿಳಿಸಿದೆ.

ಮಾರ್ಗಸೂಚಿಯಲ್ಲಿ ಏನಿದೆ?: ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳ ಅವಶ್ಯವಿರುವುದಿಲ್ಲ.

ತಾಯಿ ಕಾರ್ಡ್, ಆಧಾರ್‌ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.

ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು. ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ