Please assign a menu to the primary menu location under menu

CrimeNEWSನಮ್ಮಜಿಲ್ಲೆ

ಬಿಬಿಎಂಪಿ ಯಮಸ್ವರೂಪಿ ರಸ್ತೆ ಗುಂಡಿಗೆ ಬಿದ್ದು ಕೋಮಾಕ್ಕೆ ಜಾರಿದ ಯುವಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾಗುವವರ ಸಂಖ್ಯ ಹೆಚ್ಚುತ್ತಲೇ ಇದೆ. ಆದರೂ ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಳ್ಳದೆ ಕಣ್ಮುಚ್ಚಿ ಕುಳಿತಿದ್ದಾರೆ.

ಅಧಿಕಾರಿಗಳ ಮತ್ತು ಸ್ವತಃ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು ಬೆಂಗಳೂರಲ್ಲಿ ಇನ್ನೆಷ್ಟು ಬಲಿ ಬೇಕು ಎಂದು ಕೇಳುತ್ತಿದ್ದಾರೆ.

ಇದೀಗ ರಸ್ತೆ ಗುಂಡಿಯಿಂದ ಮತ್ತೊಂದು ಅವಘಡ ಸಂಭವಿಸಿದ್ದು, ಬೈಕ್ ಸವಾರನೊಬ್ಬ ರಸ್ತೆ ಗುಂಡಿಯಿಂದಾಗಿ ಬಿದ್ದು ಕೋಮಾಗೆ ಹೋಗಿದ್ದಾರೆ. ಈ ಸರ್ಕಾರ ಮತ್ತು ಬಿಬಿಎಂಪಿಯ ಘನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸಾವು-ಬದುಕಿನ ಮಧ್ಯೆ ಸೆಣಸಾಡುವಂತಾಗಿದೆ.

ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಕಳೆದ ಮಂಗಳವಾರ ಘಟನೆ ನಡೆದಿದ್ದು, ಇದರಿಂದ ವಿದ್ಯಾರಣ್ಯಪುರ ನಿವಾಸಿ ಸಂದೀಪ್ (37) ಬಿದ್ದು ಈಗ ಕೋಮಾದಲ್ಲಿದ್ದಾರೆ.

ಅಂದು ರಾತ್ರಿ 9.30ರ ಸುಮಾರಿಗೆ ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ಮನೆಗೆ ಬರುತ್ತಿದ್ದರು. ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಎಚ್ಎಂಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲೆಗೆ ತೀವ್ರ ಗಾಯವಾಗಿರುವ ಹಿನ್ನೆಲೆಯಲ್ಲಿ ಸಂದೀಪ್‌ಗೆ ಆಪರೇಷನ್ ಮಾಡಲಾಗಿದೆ. ಸದ್ಯ ಸಂದೀಪ್ ಕೋಮಾದಲ್ಲಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸಂದೀಪ್‌ ಸ್ಥಿತಿ ನೋಡಿದ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ