CrimeNEWSಶಿಕ್ಷಣ-

ಶಾಲೆಯಲ್ಲೇ ಕುಸಿದು ಅನುಮಾನಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಆರ್ ಡಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಶಾಲೆಯಲ್ಲಿ ಕುಸಿದು ಬಿದ್ದು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಮಚಂದ್ರಾಪುರದ ಆರ್ ಡಿ ಇಂಟರ್‌ ನ್ಯಾಷನಲ್ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿ ನಿಶಿತಾ (9) ಮೃತಳು. ನಿಶಿತಾ ಪಾಲಕರಾದ ನಾಗೇಂದ್ರ- ಸರಸ್ವತಿ ಅವರು ಜಾಲಹಳ್ಳಿಯ ರಾಮಚಂದ್ರಾಪುರದ ದೊಡ್ಡಚೆನ್ನಪ್ಪ ಬಡಾವಣೆಯಲ್ಲಿ ನಿವಾಸಿಗಳಾಗಿದ್ದಾರೆ.

ಎಂದಿನಂತೆ ಶುಕ್ರವಾರ (ನ.4) ತರಗತಿಗೆ ತೆರಳಿದ್ದ ನಿಶಿತಾ, ಮಧ್ಯಾಹ್ನ 1.30ರ ಸುಮಾರಿಗೆ ಏಕಾಏಕಿ ತರಗತಿಯಲ್ಲೇ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆ ಕೂಡಲೇ ಶಾಲೆಯ ಶಿಕ್ಷಕರೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ, ತಪಾಸಣೆ ನಡೆಸಿದ ವೈದ್ಯರು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದರು ಎಂದು ಗಂಗಮ್ಮನ ಗುಡಿ ಪೊಲೀಸರು ಹೇಳಿದ್ದಾರೆ.

ಇನ್ನು ಪಾಲಕರು ನೀಡಿರುವ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಶೀಘ್ರವೇ ತನಿಖೆ ಆರಂಭಿಸಲಾಗುವುದು ಎಂದು ತಿಳಿಸಿದ ಪೊಲೀಸರು, ಶಿಕ್ಷಕರೊಬ್ಬರು ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂಬ ಹೇಳಿಕೆಯು ಇದೆ. ಈ ಬಗ್ಗೆ ಪೂರ್ಣ ಮಾಹಿತಿ ಕಲೆಹಾಕುವ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”