
ರಾಮನಗರ: ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿದ ಹುಸಿ ಬಾಂಬ್ ಕರೆಯೊಂದು ಬಂದಿತ್ತು.
ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆಸಿತು.
ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇಡಲಾಗುತ್ತಿದೆ. ಜತೆಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳ ಪತ್ತೆ ಕಾರ್ಯದಲ್ಲೂ ಅಧಿಕಾರಿಗಳು ನಿರತರಾಗಿದ್ದಾರೆ.