CrimeNEWSನಮ್ಮಜಿಲ್ಲೆ

ತಿ.ನರಸೀಪುರ: ಭತ್ತದ ಗದ್ದೇಲಿ ತುಂಡಾಗಿದ್ದ ವಿದ್ಯುತ್ ತಂತಿಗೆ ಮೂವರು ರೈತರು ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಮೂವರು ರೈತರು ದಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಿಲಸೋಗೆ ಗ್ರಾಮದ ನಿವಾಸಿಗಳಾದ ರಾಚೇಗೌಡ (60), ಮಹದೇವಸ್ವಾಮಿ (38) ಹಾಗೂ ಹರೀಶ್ (32) ಮೃತ ರೈತರು.

ರಾಚೇಗೌಡ ಇಂದು ಮುಂಜಾನೆ ಭತ್ತದ ಗದ್ದೆಗೆ ಗೊಬ್ಬರ ಹಾಕಲು ಹೋದಾಗ ತಮ್ಮ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ವಿದ್ಯುತ್ ಆಘಾತಕ್ಕೆ ಒಳಗಾಗಿ ಒದ್ದಾಡುತ್ತಿದ್ದ ಅವರನ್ನು ರಕ್ಷಿಸಲು ಮಹದೇವಸ್ವಾಮಿ ಮುಂದಾಗಿದ್ದಾರೆ.

ಈ ವೇಳೆ ಮಹದೇವಸ್ವಾಮಿ ಅವರಿಗೂ ಕೂಡಾ ವಿದ್ಯುತ್ ಪ್ರವಹಿಸಿದೆ. ಈ ಇಬ್ಬರು ಒತ್ತಾಡುತ್ತಿರುವುದನ್ನು ಗಮನಿಸಿದ ಹರೀಶ್‌ ಅವರ ಪ್ರಾಣ ಉಳಿಸಲು ಮುಂದಾಗಿದ್ದಾರೆ. ಈ ವೇಳೆ ಹರೀಶ್ ಕೂಡಾ ಆಘಾತಕ್ಕೊಳಗಾಗಿದ್ದಾರೆ. ಈ ರೀತಿ ಮೂವರು ಸ್ಥಳದಲ್ಲೇ ವಿದ್ಯುತ್‌ಗೆ ಬಲಿಯಾಗಿದ್ದಾರೆ.

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಮೂವರು ಮೃತಪಟ್ಟು ಗಂಟೆ ಕಳೆದರೂ, ಅಧಿಕಾರಿಗಳು ಸ್ಥಳಕ್ಕಾಗಮಿಸಿಲ್ಲ. ಮೃತರ ಕುಟುಂಬಕ್ಕೆ ನ್ಯಾಯ
ಕೊಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ತಿ.ನಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ