CrimeNEWSನಮ್ಮಜಿಲ್ಲೆ

ಕುರಿಕಳ್ಳನ ಬಂಧನ – ಎರಡು ಕುರಿಗಳ ವಶಕ್ಕೆ ಪಡೆದ ರಾಮಾಪುರ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಹನೂರು : ಕುರಿ ಕಳವು ಮಾಡಿ ಪರಾರಿಯಾಗುತ್ತಿದ್ದ ಕುರಿಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ಎರಡು ಕುರಿಗಳನ್ನು ವಶಕ್ಕೆ ಪಡೆದಿದ್ದಾರೆ.

ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಕುರಿಕಳವು ಮಾಡಿದ ಆರೋಪಿ ಇಂದಿರಾ ಕಾಲೋನಿಯ ನಿವಾಸಿ ವಿಶ್ವ(27) ಎಂಬಾತನನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸುತ್ತ ಮುತ್ತಲ ಗ್ರಾಮಗಳಲ್ಲಿ ಕುರಿ ಕಳ್ಳತನ ವಾಗುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದವು. ಈ ಬೆನ್ನಲ್ಲೆ ಎಚ್ಚೆತ್ತ ರಾಮಾಪುರ ಪೊಲೀಸ್‌ ಠಾಣೆ
ಇನ್ಸ್ ಪೆಕ್ಟರ್ ನಂಜುಂಡಸ್ವಾಮಿ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ತಂಡ ರಚಿಸಿದ್ದರು.

ಆ ತಂಡ ಗ್ರಾಮದ ಮಹದೇಶ್ವರ ದೇವಾಲಯದ ಬಳಿ ದಾಳಿ ನಡೆಸಿದ್ದು, ಇ ವೇಳೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವಿಶ್ವನನ್ನು ಹಿಡಿದು ವಿಚಾರಣೆ ಮಾಡಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಆತನನ್ನು ಬಂಧಿಸಿ 2ಕುರಿಗಳನ್ನು ವಶಕ್ಕೆ ಪಡೆದು ಮುಂದಿಮ ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಹನೂರು ತಾಲೂಕಿನ ರಾಮಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಸೈಯದ್ ಮುಷರಫ್ , ನಾಗೇಂದ್ರ,ರಮೇಶ್ ಲಿಯಾಕತ್ ಅಲಿಖಾನ್ ಸೇರಿದಂತೆ ಇನ್ನಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ