ನಮ್ಮಜಿಲ್ಲೆನಮ್ಮರಾಜ್ಯ

KKRTC ಸಂಸ್ಥೆ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ರಾಷ್ಟ್ರ ಪ್ರಶಸ್ತಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸದಸ್ಯತ್ವವನ್ನು ಹೊಂದಿರುವ ಪ್ರತಿಷ್ಠಿತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU) ವತಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಕ್ಕೆ 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ (National Transport Excellence Award) ಲಭಿಸಿರುವುದು ಹರ್ಷದಾಯಕವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ನಿಗಮದ ಸಂಚಾರಿ ತರಬೇತಿ ವಾಹನವನ್ನು ಘಟಕಗಳಿಗೆ ತೆಗೆದುಕೊಂಡು ಹೋಗಿ ಚಾಲಕರ ತರಬೇತಿಗೆ ಅವಕಾಶ ಕಲ್ಪಿಸಲು ತೆಗೆದುಕೊಂಡ ಉಪಕ್ರಮಕ್ಕೆ (Initiatives) ರಾಷ್ಟ್ರೀಯ ರಸ್ತೆ ಸಾರಿಗೆಗಳ ನಿಗಮದ ಒಕ್ಕೂಟವು ರಾಷ್ಟ್ರಮಟ್ಟದ ‘ಬೆಸ್ಟ್ ರೋಡ್ ಸೇಫ್ಟಿ ಪ್ರಾಕ್ಟಿಸಸ್’ ವಿಭಾಗದಡಿ ಪ್ರಥಮ ಪ್ರಶಸ್ತಿಗೆ ಆಯ್ಕೆ ಮಾಡಿ. ಪ್ರಶಸ್ತಿಯನ್ನು ಮಾ.15ರಂದು ದೆಹಲಿಯಲ್ಲಿ ನಡೆದ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟದ 64ನೇ ವಾರ್ಷಿಕ ಸಮಾವೇಶದಲ್ಲಿ ಪ್ರದಾನ ಮಾಡಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರಿಗೆ ವ್ಯವಸ್ಥಿತ ಮತ್ತು ಸುರಕ್ಷಿತ ಬಸ್ ಸೇವೆ ಒದಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2022-23ನೇ ಸಾಲಿನಲ್ಲಿ ಜಿಲ್ಲಾಡಳಿತದಿಂದ ಹೈಟೆಕ್‌ ಮಾದರಿಯ ಸಂಚಾರಿ ತರಬೇತಿ ವಾಹನ (ಮೊಬೈಲ್ ಕಾನ್ಸರೆನ್ಸ್ ಟ್ರೇನಿಂಗ್ ಬಸ್) ಪಡೆದುಕೊಂಡು ಈ ವಾಹನದಲ್ಲಿ ಚಾಲಕರಿಗೆ ರಸ್ತೆ ಸುರಕ್ಷತೆ ನಿಯಮಗಳ ಕುರಿತು ತರಬೇತಿ ನೀಡುವುದಕ್ಕಾಗಿ ಸಿದ್ಧಪಡಿಸಲಾಗಿದೆ. ಈ ವಾಹನವನ್ನು ನಿಗಮದ 9 ವಿಭಾಗಗಳ ವ್ಯಾಪ್ತಿಯ 52 ಘಟಕಗಳಿಗೆ ತೆಗೆದುಕೊಂಡು ಹೋಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ತರಬೇತಿ ವಾಹನದ ವೈಶಿಷ್ಟ್ಯ: ಬಸ್‌ನಲ್ಲಿ 16 ಆಸನಗಳಿದ್ದು, ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಇದೆ. ಎಲ್‌ಇಡಿ ಸ್ಟ್ರೀನ್ ಹಾಗೂ ಆಡಿಯೋ ಸಿಸ್ಟಮ್ ವ್ಯವಸ್ಥೆ ಇರುತ್ತದೆ. ಈ ವಾಹನವನ್ನು ಘಟಕಗಳಿಗೆ ತೆಗೆದುಕೊಂಡು ಹೋಗಿ 2022-23ನೇ ಸಾಲಿನಲ್ಲಿ ಒಟ್ಟು 6,583 ಚಾಲಕರಿಗೆ ತರಬೇತಿ ನೀಡಲಾಗಿದೆ. ಇದರಿಂದ ನಿಗಮಕ್ಕೆ ಸರಾಸರಿ 2 ಕೋಟಿ ರೂ.ಗಳಷ್ಟು ವೆಚ್ಚದಲ್ಲಿ ಉಳಿತಾಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ವಿವರಿಸಿದ್ದಾರೆ.

ಇನ್ನು ಈ ಪ್ರಶಸ್ತಿಯನ್ನು ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜಯಪುರ ವಿಭಾಗದ ಮುಖ್ಯ ಯಾಂತ್ರಿಕ ಶಿಲ್ಪಿ ಸಂತೋಷ್ ಗೋಗೇರಿ, ಮತ್ತು ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸ್ವೀಕರಿಸಿದ್ದಾರೆ. ಈ ವಿಚಾರವನ್ನು ಅವರು ಮಾ.24ರಂದು ಸಚಿವರೊಂದಿಗೆ ಹಂಚಿಕೊಂಡಿದ್ದಾರೆ.

ಸಂಸ್ಥೆಯ ಈ ಸಾಧನೆಯನ್ನು ಶ್ಲಾಘಿಸಿರುವ ಸಚಿವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸುಗಳತ್ತ ಸಾಗಲಿ ಎಂಬ ಹಾರೈಸಿದ್ದಾರೆ.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?