NEWSಕ್ರೀಡೆದೇಶ-ವಿದೇಶ

ಹೀನಾಯ ಸೋಲಿನ ಬಳಿಕ ಬಿಕ್ಕಿ ಬಿಕ್ಕಿ ಅತ್ತರು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಆಡಿಲೇಡ್‌: ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋತ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಪಂದ್ಯ ಮುಗಿದ ಬಳಿಕ ರೋಹಿತ್‌ ಶರ್ಮಾ ಡಗೌಟ್‌ನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ. ತಲೆಯನ್ನು ಕೆಳಗೆ ಹಾಕಿ ಬೇಸರ ವ್ಯಕ್ತಪಡಿಸುತ್ತಿದ್ದಾಗ ಕೋಚ್‌ ದ್ರಾವಿಡ್‌ ಸಮಾಧಾನ ಮಾಡಿದ್ದಾರೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ಆರಂಭದಲ್ಲೇ ರಾಹುಲ್‌ ವಿಕೆಟ್‌ ಕಳೆದುಕೊಂಡರೂ ನಂತರ ರೋಹಿತ್‌ ಮತ್ತು ಕೊಹ್ಲಿ ನಿಧಾನವಾಗಿ ಆಡಿ ಇನ್ನಿಂಗ್ಸ್‌ ಕಟ್ಟಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಬಿರುಸಿನ ಆಟವಾಡಿದ್ದರಿಂದ ತಂಡದ ಮೊತ್ತ 160ರ ಗಡಿ ದಾಟಿತ್ತು. ಅಂತಿಮವಾಗಿ ಭಾರತ 6 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿತ್ತು.

ಸವಾಲಿನ ಮೊತ್ತವೇ ಆಗಿದ್ದರೂ ಭಾರತದ ಬೌಲರ್‌ಗಳಿಂದ ಉತ್ತಮ ಪ್ರದರ್ಶನ ಕಂಡು ಬರಲಿಲ್ಲ. ಜೋಸ್‌ ಬಟ್ಲರ್‌ ಮತ್ತು ಅಲೆಕ್ಸ್‌ ಹೇಲ್ಸ್‌ ಬೌಂಡರಿ, ಸಿಕ್ಸರ್‌ ಸಿಡಿಸಿ ತಂಡವನ್ನು ಫೈನಲಿಗೆ ಕೊಂಡೊಯ್ದರು. ಬಟ್ಲರ್‌ 80 ರನ್‌(49 ಎಸೆತ, 9 ಬೌಂಡರಿ, 3 ಸಿಕ್ಸರ್‌) ಅಲೆಕ್ಸ್‌ ಹೇಲ್ಸ್‌ 86 ರನ್‌(47 ಎಸೆತ, 4 ಬೌಂಡರಿ, 7 ಸಿಕ್ಸರ್‌) ಚಚ್ಚಿ ಇಂಗ್ಲೆಂಡ್‌ಗೆ 10 ವಿಕೆಟ್‌ಗಳ ಜಯವನ್ನು ತಂದುಕೊಟ್ಟರು.

ಭಾರತದ ಮೊದಲ 10 ಓವರ್‌ಗಳಲ್ಲಿ ಜಾಸ್ತಿ ರನ್‌ ಬಂದಿರಲಿಲ್ಲ. ಮೊದಲ ಪವರ್‌ ಪ್ಲೇ 6 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 38 ರನ್‌ ಗಳಿಸಿತ್ತು. 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 62 ರನ್‌ ಗಳಿಸಿತ್ತು. 15 ಓವರ್‌ಗಳಲ್ಲಿ 100 ರನ್‌ ಬಂದಿದ್ದರೆ ಕೊನೆಯ 30 ಎಸೆತಗಳಲ್ಲಿ 68 ರನ್‌ ಬಂದಿತ್ತು.

ಇತ್ತ ಇಂಗ್ಲೆಂಡ್‌ ಮೊದಲ ಓವರಿನಿಂದಲೇ ದಂಡಿಸಲು ಆರಂಭಿಸಿತ್ತು ಮತ್ತು ಓವರ್‌ ಒಂದಕ್ಕೆ ಸರಾಸರಿ 10 ರನ್‌ಗಳು ಬರುತ್ತಿದ್ದವು. ಮೊದಲ ಪವರ್‌ ಪ್ಲೇನಲ್ಲಿ 63 ರನ್‌ ಬಂದರೆ 10.1 ಓವರ್‌ನಲ್ಲಿ 100 ರನ್‌ ಬಂದಿತ್ತು. ಕೇವಲ 83 ಎಸೆತಗಳಲ್ಲಿ 150 ರನ್‌ ದಾಖಲಾಗಿತ್ತು. ಅಂತಿಮವಾಗಿ 16 ಓವರ್‌ಗಳಲ್ಲಿ 170 ರನ್‌ ಹೊಡೆಯುವ ಮೂಲಕ ಇಂಗ್ಲೆಂಡ್‌ ಫೈನಲ್‌ ಪ್ರವೇಶಿಸಿತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ