NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಸುಳ್‌ ಬಿಜೆಪಿ, ಸುಳ್‌ ಸಿಎಂ – ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ : ಜೆಡಿಎಸ್‌ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ ಎಂದು ಜೆಡಿಎಸ್‌ ಕಿಡಿಕಾರಿದೆ.

ಇನ್ನು ಕಾರ್ಯಕ್ರಮಕ್ಕೆ ದೇವೇಗೌಡರ ಆಹ್ವಾನ ವಿಚಾರ ಸಂಬಂಧ ಬಿಜೆಪಿ ಸಮರ್ಥನೆಗೆ ಜೆಡಿಎಸ್‌ ಕೆಂಡಾಮಂಡಲವಾಗಿದ್ದು, ಸುಳ್‌ ಬಿಜೆಪಿ, ಸುಳ್‌ ಸಿಎಂ ಎಂದು ಹ್ಯಾಷ್‌ ಟ್ಯಾಗ್‌ ಹಾಕಿ ಸರಣಿ ಟ್ವೀಟ್‌ ಮೂಲಕ ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಹೇಳಿದೆ.

ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ಮೋದಿ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ.

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ ಎಂದು ಪ್ರಶ್ನಿಸಿದೆ.

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ.

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ!!

20 ದಿನಗಳ ಹಿಂದೆ ಸಚಿವ @drashwathcn ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ, ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ.

ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿ @BSBommai ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ ಎಂದು ಪ್ರಶ್ನಿಸಿದೆ.

ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’ / ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು @BJP4Karnataka ನೋಡಲಿಲ್ಲವೆ?

ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಶ್ರೀ ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?

ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು @BJP4Karnataka ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದು ಆತಂಕ ವ್ಯಕ್ತಪಡಿಸಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...