NEWSನಮ್ಮರಾಜ್ಯರಾಜಕೀಯ

ನಿವೃತ್ತ ಯೋಧನ ಉಸಿರು ನಿಲ್ಲಿಸಿದ ರಸ್ತೆ ಗುಂಡಿ -ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರಕಾರಕ್ಕೆ : ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ನನಗೆ ತೀವ್ರ ದುಃಖ ಉಂಟು ಮಾಡಿದೆ. ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ ಎಂದು ಮಾಜು ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಶಾಸಕಾಂಗಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತಿ ಆಗಿದ್ದ ಕುಮಾರ್ (39) ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ದು ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ ಎಂದು ಕಿಡಿಕಾರಿದ್ದಾರೆ.

ಕಣ್ಮುಂದೆಯೇ ಜೀವ ಬಿಟ್ಟ ಪುತ್ರನ ಪಾರ್ಥಿವ ಶರೀರದ ಮುಂದೆ ಗೋಳಾಡುತ್ತಿದ್ದ ಆ ವೃದ್ಧ ತಂದೆಯನ್ನು ಕಂಡು ನನ್ನ ಮನಸ್ಸಿಗೆ ಆಘಾತವಾಗಿದೆ. ಇನ್ನೆಷ್ಟು ತಂದೆ ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು ಎಂದು ಪ್ರಶ್ನಿಸಿದ್ದಾರೆ.

ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಯೋಧರ ದುರಂತ ಸಾವಿಗೆ ಕಾರಣವಾದ ರಸ್ತೆಯೂ ಸೇರಿ ಮಂಡ್ಯ ನಗರಸಭೆ ವ್ಯಾಪ್ತಿಯ ಎಲ್ಲ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಡುಗಡೆ ಮಾಡಿದ್ದೆ. ದುರಂತ ಎಂದರೆ, ನನ್ನ ಸರಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಆ 50 ಕೋಟಿ ರೂ. ಗಳನ್ನು ಕೂಡಲೇ ಹಿಂಪಡೆಯಿತು.

ರಾಜಕೀಯ ಕಾರಣಕ್ಕೆ ಹಣ ವಾಪಸ್ ಪಡೆದ ರಾಜ್ಯ ಬಿಜೆಪಿ ಸರಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ. ಇದು ಅಮಾನುಷ. ಸರಕಾರವು ನೊಂದ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು.

ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...