NEWSನಮ್ಮಜಿಲ್ಲೆ

ಮಂಗಳೂರು: KSRTCಯಲ್ಲಿ ಚಾಲಕರ ನೇಮಕ; ಸುಳ್ಳು ಪ್ರಕಟಣೆ – ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಎಂದು ನಗರದ ಪತ್ರಿಕೆಯೊಂದರಲ್ಲಿ ಸುಳ್ಳು ಪ್ರಕಟಣೆ ನೀಡಿರುವ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದೆ.

ನ.11ರಂದು ನಗರದ ಪತ್ರಿಕೆಯೊಂದರಲ್ಲಿ ಮ್ಯಾನ್ ಪವರ್ ರಿಕ್ರೂಟ್‌ಮೆಂಟ್ ಏಜೆನ್ಸಿ, (ಎನ್‌ಜಿಒ) ಬಾಳೆಗುಂಡಿ ಸದನ ಕೆ.ಆರ್.ಪುರಂ ಮುಖ್ಯರಸ್ತೆ, ಮೊದಲನೆ ಮಹಡಿ ಶಿವಮೊಗ್ಗ ಎಂಬ ಸಂಸ್ಥೆಯ ಹೆಸರಿನಲ್ಲಿ ನೀಡಲಾದ ಪ್ರಕಟಣೆಯಲ್ಲಿ ಕೆಎಸ್ಸಾರ್ಟಿಸಿ ಮಂಗಳೂರು ಡಿಪೋದಲ್ಲಿ 250 ಹುದ್ದೆಗಳು, ಪುತ್ತೂರು ವಿಭಾಗದಲ್ಲಿ 200 ಹುದ್ದೆಗಳು, ಚಾಮರಾಜ ನಗರ ವಿಭಾಗದಲ್ಲಿ 100 ಹುದ್ದೆಗಳು ಸೇರಿದಂತೆ ಒಟ್ಟು 650 ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಪ್ರತಿ ಅಭ್ಯರ್ಥಿಗಳು ಬಯೋಡಾಟಾದೊಂದಿಗೆ 1,000 ರೂ. ಅರ್ಜಿ ಶುಲ್ಕದ ಡಿಡಿಯನ್ನು ಮತ್ತು 10,000 ರೂ. ಡಿಡಿಯನ್ನು ನೇಮಕಾತಿ ಅರ್ಜಿಯೊಂದಿಗೆ ಸಲ್ಲಿಸಬೇಕು. ನೇಮಕಾತಿ ತಿರಸ್ಕೃತಗೊಂಡಾಗ 10,000 ರೂ. ಹಿಂದಿರುಗಿಸಲಾಗುವುದು. ನೇಮಕಾತಿಯ ಒಟ್ಟು ಶುಲ್ಕ ಒಬ್ಬರಿಗೆ 25,000 ರೂ. ಮಾತ್ರವಿದ್ದು 15,000 ರೂ.ಗಳನ್ನು ನೇಮಕಾತಿ ಪತ್ರ ಪಡೆಯುವ ಸಂದರ್ಭ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಈ ಬಗ್ಗೆ ಕೆಎಸ್ಸಾರ್ಟಿಸಿ ಬೆಂಗಳೂರು ಕೇಂದ್ರ ಕಚೇರಿ ಹಾಗೂ ವಿಭಾಗಗಳಿಂದ ಯಾವುದೇ ಪ್ರಕಟಣೆ ನೀಡಿಲ್ಲ. ಆದರೆ, ಆರೋಪಿಗಳು ಕೆಎಸ್ಸಾರ್ಟಿಸಿ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ನಕಲಿ ನೌಕರಿ ಆಮಿಷವೊಡ್ಡಿ ಹಣ ಸಂಗ್ರಹಿಸಿ ವಂಚಿಸುವ ಉದ್ದೇಶದಿಂದ ಸುಳ್ಳು ಪ್ರಕಟಣೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ಸಂಬಂಧಪಟ್ಟ ಎನ್‌ಜಿಒಗಳ ವಿಚಾರಣೆ ನಡೆಸುತ್ತಿದ್ದಾರೆ. ಇದು ಎನ್‌ಜಿಒಗಳೇ ಕೊಟ್ಟಿರುವ ಪ್ರಕಟಣೆಯೋ ಅಥವಾ ಯಾರಾದರೂ ನೀಡಿದ್ದಾರೋ ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...