NEWSಕ್ರೀಡೆಶಿಕ್ಷಣ-

ಮೈಸೂರು ಜಿಲ್ಲಾಮಟ್ಟದ ಥ್ರೋಬಾಲ್‌ನಲ್ಲಿ ಗೆಲುವಿನ ನಗೆ ಬೀರಿದ ಮೂಗೂರು ಶಾಲೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜಯದ ನಗೆ ಬೀರಿದ್ದಾರೆ.

ಮೂಗೂರು ಕೆಪಿಎಸ್‌ ಶಾಲಾ ಆವರಣದಲ್ಲಿ ಇಂದು ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಒಟ್ಟು ಮೈಸೂರು ಜಿಲ್ಲೆಯ ಒಟ್ಟು ಒಂಬತ್ತು ತಾಲೂಕಿನ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಭಾಗವಹಿಸಿದ್ದವು.

ಈ ವೇಳೆ ಬಾಲಕರ ವಿಭಾಗದ ಪಂದ್ಯಾವಳಿಯಲ್ಲಿ ತಿ.ನರಸೀಪುರ ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಪ್ರತಿನಿಧಿಸಿದ್ದು ಫೈನಲ್ ನಲ್ಲಿ ಮೈಸೂರು ದಕ್ಷಿಣ ತಾಲೂಕು ತಂಡವನ್ನು 2-0 ಅಂತರದಲ್ಲಿ ಸೋಲಿಸಿ, ವಿಜಯದ ನಗೆ ಬೀರಿದರು.

ಈ ಪಂದ್ಯದಲ್ಲಿ ವಿದ್ಯಾರ್ಥಿಗಳಾದ ನಂದನ್, ಗೌತಮ, ನಿತಿನ್ ಕುಮಾರ್, ಸಚಿನ್, ಹರ್ಷ, ಮಹೇಶ್ ಕುಮಾರ್, ಸಂತೋಷ್ ಕುಮಾರ್ ಮಹೇಶ, ಮನು ತಂಡವನ್ನು ಪ್ರತಿನಿಧಿಸಿದ್ದರು.

ಈ ವೇಳೆ ಮಾತನಾಡಿದ ಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಈಗ ಸರಕಾರದಿಂದ ಕ್ರೀಡೆಗೆ ಸಾಕಷ್ಟು ಉತ್ತೇಜನ ಸಿಗುತ್ತಿದೆ. ಸಂಘ, ಸಂಸ್ಥೆಗಳು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುತ್ತಿವೆ. ಇಂದಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಕಷ್ಟು ಅವಕಾಶ ಲಭಿಸುತ್ತಿದೆ. ಇದನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಯತ್ನಿಸಬೇಕು ಎಂದರು.

ಇನ್ನು ತಮ್ಮ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಂದ್ಯ ಎಂದ ಮೇಲೆ ಸೋಲು ಗೆಲುವು ಇದ್ದೆ ಇರುತ್ತದೆ. ಆದರೆ ಅವೆರಡನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಥ್ರೋಬಾಲ್‌ನಲ್ಲಿ ತಮ್ಮ ಶಾಲಾ ಮಕ್ಕಳು ಗೆದ್ದಿರುವುದಕ್ಕೆ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಹನುಮಂತಪ್ಪ ತಳವಾರ್, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶ್, ಎಸ್‌ಡಿಎಂಸಿ ಉಪಾಧ್ಯಕ್ಷ ಸಿದ್ದರಾಜು, ಶಿಕ್ಷಕರಾದ ದೇವರಾಜು, ಕೇಶವ್, ಕಾವೇರಿ, ವೀಣಾ, ವನಜಾ, ರಮೇಶ್, ಆನಂದ, ಮಹಾದೇವ್, ರಂಜಿತಾ ಅವರು ಅಭಿನಂದಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ