CRIMEನಮ್ಮಜಿಲ್ಲೆರಾಜಕೀಯ

ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ- ರಾಜಣ್ಣ ಪುತ್ರನ ಹೇಳಿಕೆಗೆ ರಂಗನಾಥ್‌ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಣಿಗಲ್‌ ನೀರಿನ ಸಮಸ್ಯೆ ಪರಿಹರಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಯಾಬಿನೆಟ್‌ನಲ್ಲಿ ನಮಗೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಅದಕ್ಕೆ ರಾಜೇಂದ್ರ ರಾಜಣ್ಣ ಯಾಕೆ ಮಾತಾಡ್ತಾರೆ. ನಾನು ಫೋನ್‌ ಮಾಡಿ ಬೆದರಿಕೆ ಹಾಕ್ತೀನಿ ಅಂತಾರೆ, ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ ನಾನು ಸಾಮಾನ್ಯ ರೈತನ ಮಗ ಅಂತ ಕುಣಿಗಲ್‌ ಶಾಸಕ ರಂಗನಾಥ್‌ ಸಚಿವ ರಾಜಣ್ಣ ಪುತ್ರನ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹೇಮಾವತಿ ನಾಲೆ ವಿಚಾರದಲ್ಲಿ ಕುಣಿಗಲ್ ಶಾಸಕ ರಂಗನಾಥ್ ಬೆದರಿಕೆ ಹಾಕ್ತಿದ್ದಾರೆ ಎಂಬ ರಾಜಣ್ಣ ಪುತ್ರ ರಾಜೇಂದ್ರ ಹೇಳಿಕೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಫೋನ್‌ನಲ್ಲಿ ಮಾತಾಡಿದ್ರೆ ಅದು ಬೆದರಿಕೆ ಹೇಗೆ ಆಗಬೇಕು ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಬಂದಿದೆ. ಜನರ ಪರ ನಾವು ಕೆಲಸ ಮಾಡೋಣ. ಶಿರಸಾವಹಿಸಿ ಕೆಲಸ ಮಾಡೋಣ. ಸಹಕಾರ ಸಂಘದಲ್ಲಿ ಬಿಜೆಪಿ- ಜೆಡಿಎಸ್ ಸದಸ್ಯರೇ ಅನೇಕ ವರ್ಷಗಳಿಂದ ಇದ್ದಾರೆ. ನಾನು ಕಾಂಗ್ರೆಸ್ ಬೆಂಬಲಿಗರನ್ನು ತರೋಕೆ ಪ್ರಯತ್ನ ಮಾಡುತ್ತಿದ್ದೇನೆ. ಹೀಗಾಗಿ ಸಹಕಾರಿ ಸಂಘದಿಂದ ಸಾಲ ಕೊಡಿ ಅಂತ ಸದನದಲ್ಲಿ ಕೇಳಿದ್ದೇನೆ. ರಾಜಣ್ಣ ಜತೆ ನನಗೆ ವೈಮಸ್ಸಿಲ್ಲ. ಅವರ ಜತೆ ಸಲುಗೆಯಿಂದ ಬಂದಿದ್ದೇನೆ. ಯಾಕೆ ನನ್ನ ಮೇಲೆ ಭಿನ್ನಾಭಿಪ್ರಾಯ ಮಾಡುತ್ತಿದ್ದಾರೆ ಅಂತ ಗೊತ್ತಿಲ್ಲ ಎಂದರು.

ನಾನು ಯಾವ ಮಂತ್ರಿ ಮಗ ಅಲ್ಲ. ಬೆದರಿಕೆ ಹಾಕೋ ಗುಣ ಇಲ್ಲ. ಶಿವಕುಮಾರ್ ಅವರು ಶಾಸಕನಾಗಿ ಹೇಗೆ ನಡೆದುಕೊಳ್ಳಬೇಕು ಅಂತ ಹೇಳಿ ಕೊಟ್ಟಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಹೇಳಿದರು.

ಇನ್ನು ಕುಣಿಗಲ್‌ಗೆ ಕೊರಟಗೆರೆಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ, ಮಧುಗಿರಿಗೆ ಕೊಡುತ್ತಿಲ್ಲ ಅಂತ ರಾಜೇಂದ್ರ ಅರೋಪ ಮಾಡಿದ್ದಾರೆ. ನನ್ನನ್ನ ಜನ ಎರಡು ಬಾರಿ ಗೆಲ್ಲಿಸಿದ್ದಾರೆ ಅವರಿಗೆ ನೀರು ಕೊಡಬೇಕು. ಕುಣಿಗಲ್‌ಗೆ ಶೇ.90 ನೀರು ಹರಿದಿಲ್ಲ. ಕುಣಿಗಲ್‌ಗೆ ಹಾಸನದಿಂದ ನೀರು ಬೇಕು, ನೀರು ತರಲು ನಾನು ಹೋರಾಟ ಮಾಡುತ್ತೇನೆ ಎಂದರು.

ಜನರಿಗೆ ನಮ್ಮ ಸರ್ಕಾರದ ಬಗ್ಗೆ ನಿರೀಕ್ಷೆ ಇದೆ, ಅದನ್ನು ಮಾಡಬೇಕು. ಬೀದಿಯಲ್ಲಿ ಮಾತಾಡೋದಕ್ಕಿಂತ ಪಕ್ಷದ ವೇದಿಕೆಯಲ್ಲಿ ಮಾತಾಡಬೇಕು. ಮದುಗಿರಿಯವರಿಗೆ ನೀರು ತರೋಕೆ ನಾನು ಪ್ರಯತ್ನ ಮಾಡುತ್ತೇನೆ ನಾನೇ ನಿಂತು ಮಧುಗಿರಿ ರೈತರಿಗೆ ನೀರು ಕೊಡ್ತೀನಿ. ಕುಣಿಗಲ್ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ಹೇಳಿದರು.

Deva
the authorDeva

Leave a Reply

error: Content is protected !!