NEWSದೇಶ-ವಿದೇಶರಾಜಕೀಯ

ಸತ್ಯೇಂದ್ರ ಜೈನ್‍ಗೆ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿತ್ತೇ ಹೊರತು ಮಸಾಜ್ ಅಲ್ಲ : ಬಿಜೆಪಿಗೆ ಸಿಎಂ ಕೇಜ್ರಿವಾಲ್ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಎಎಪಿಯ ಸಚಿವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿತ್ತೇ ಹೊರತು ಮಸಾಜ್ ಅಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇತ್ತೀಚೆಗಷ್ಟೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ (AAP) ಸಚಿವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದು ಸತ್ಯ ಇರಬಹುದು ಎಂದು ಮಾಧ್ಯಮಗಳಲ್ಲೂ ಸುದ್ದಿ ಅತೀ ವೇಗವಾಗಿ ಪ್ರಸಾವಾಗಿತ್ತು. ಆದರೆ ಆ ಎಲ್ಲವನ್ನು ತಳ್ಳಿಹಾಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯವರಿಗೆ ಇಂಥ ಕೆಲಸ ಮಾಡುವುದು ಬಿಟ್ಟು ಬೇರೆ ಇನ್ನೇನಿದೆ ಎಂದು ಕಿಡಿಕಾರಿದ್ದಾರೆ.

ವಡೋದ್ರಾದಲ್ಲಿ (Vadodra) ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್ ಅವರು, ಬಿಜೆಪಿ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ಮಸಾಜ್ ಮತ್ತು ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಮಸಾಜ್ ಅಲ್ಲ ಕೇವಲ ಫಿಸಿಯೋಥೆರಪಿ ಅದನ್ನು ತಿಳಿಯದೆ ಈ ರೀತಿ ಜನರ ದಿಕ್ಕು ತಪ್ಪಿಸುವ ಕಡೆ ಹೋಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಗುಜರಾತ್‍ನಲ್ಲಿ (Gujrat) ವಿಐಪಿ ಟ್ರೀಟ್‍ಮೆಂಟ್ ಪಡೆದವರು ಗೃಹ ಸಚಿವ ಅಮಿತ್ ಶಾ ಎಂದು ಆರೋಪಿಸಿದ ಅವರು, ಅಮಿತ್ ಶಾ ಅವರು ಗುಜರಾತ್‍ನಲ್ಲಿ ಸಚಿವರಾಗಿದ್ದಾಗ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ಪಡೆದರು, ಆದರೆ ಸತ್ಯೇಂದ್ರ ಜೈನ್‍ಗೆ ಅಂತಹದ್ದೇನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಶನಿವಾರ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ಸೆ.13- 2022ರ ಹಳೆಯ ವಿಡಿಯೊವನ್ನುಬಿಜೆಪಿ ಬಿಡುಗಡೆ ಮಾಡಿತ್ತು. ಜೈನ್‍ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ