NEWSದೇಶ-ವಿದೇಶ

ಸೊಲೊಮನ್ ದ್ವೀಪಗಳಲ್ಲಿ 7.3ರ ತೀವ್ರತೆಯ ಭೂಕಂಪ: 300 ಕಿಮೀಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬಾಲಿ: ಸೊಲೊಮನ್ ದ್ವೀಪಗಳಲ್ಲಿ ಮಂಗಳವಾರ (ನ 22) ಮಧ್ಯಾಹ್ನ 1 ಗಂಟೆಗೆ (ಭಾರತೀಯ ಕಾಲಮಾನ ಬೆಳಗ್ಗೆ 7 ಗಂಟೆ) ಪ್ರಬಲ ಭೂಕಂಪ ಸಂಭವಿಸಿದ್ದು, ದ್ವೀಪಗಳ ಸುತ್ತಮುತ್ತಲ 300 ಕಿಮೀ ವ್ಯಾಪ್ತಿಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು ಶಾಂತಸಾಗರದ ಸುನಾಮಿ ಮುನ್ನೆಚ್ಚರಿಕಾ ಕೇಂದ್ರ ಎಚ್ಚರಿಕೆ ನೀಡಿದೆ.

ಭೂ ಮೇಲ್ಮೈಯಿಂದ 15 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ ಹೇಳಿದರೆ, ದ್ವೀಪಗಳ ಸುತ್ತಮುತ್ತಲ 300 ಕಿಮೀ ವ್ಯಾಪ್ತಿಯಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಕಾಣಿಸಿಕೊಳ್ಳಬಹುದು ಎಂದು Pacific Tsunami Warning Centre ಎಚ್ಚರಿಕೆ ನೀಡಿದೆ.

ಆಸ್ಟ್ರೇಲಿಯಾದ ಪೂರ್ವ ತೀರದಲ್ಲಿ 3.2 ತೀವ್ರತೆಯ ಭೂಕಂಪವು ಮಂಗಳವಾರ ನಸುಕಿನಲ್ಲಿ ವರದಿಯಾಗಿತ್ತು. ಜನಪ್ರಿಯ ಪ್ರವಾಸಿ ತಾಣವಾಗಿರುವ ಬಾಟೆಮನ್ಸ್​ ಬೇ ಸಮೀಪದ ಸಮುದ್ರ ತೀರದಲ್ಲಿ ಈ ಭೂಕಂಪನದ ಕೇಂದ್ರವಿತ್ತು ಎಂದು ಜಿಯೊಸೈನ್ಸ್ ಆಸ್ಟ್ರೇಲಿಯಾ ಹೇಳಿದೆ. ಈ ಭೂಕಂಪನದ ಕೇಂದ್ರವು ಭೂಗರ್ಭದ 10 ಕಿಮೀ ಆಳದಲ್ಲಿತ್ತು.

ಇಂಡೋನೇಷ್ಯಾದ ಪಶ್ಚಿಮ ಜಾವಾ ನಗರದಲ್ಲಿ ಸೋಮವಾರ ಸಂಭವಿಸಿದ್ದ 5.6 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಇತರ ನೂರಾರು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯು ಈ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಇಸ್ಲಾಮಿಕ್ ವಸತಿ ಶಾಲೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದೆ. ಈ ಬಗ್ಗೆ ಒಂದು ವಿಡಿಯೋ ಸಂದೇಶವನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಸಿಯಾಂಜೂರ್‌ನಲ್ಲಿ ಭೂಕುಸಿತದಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಆದರೆ ಇನ್ನೊಬ್ಬ ವ್ಯಕ್ತಿ ಅಸುನೀಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಒಬ್ಬ ಮಹಿಳೆ ಮತ್ತು ಮಗುವನ್ನು ರಕ್ಷಿಸಿ ಸ್ಥಳಾಂತರಿಸಿದ್ದೇವೆ ಎಂದು ಸಿಯಾಂಜೂರ್ ಪೊಲೀಸ್ ಮುಖ್ಯಸ್ಥ ಡೋನಿ ಹೆರ್ಮಾವಾನ್ ಬ್ರಾಡ್‌ಕಾಸ್ಟರ್ ಮೆಟ್ರೋ ಟಿವಿಗೆ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ