ಕೋಲಾರ: ಬಂಗವಾದಿ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಶಾಲಾ ಕಟ್ಟಡಕ್ಕಾಗಿ ಕಣ್ಣೀರಿಟ್ಟರು, ರಸ್ತೆಯಲ್ಲಿ ಅಡ್ಡಗಟ್ಟಿದರು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ ಪಂಚರತ್ನ ರಥಯಾತ್ರೆ ವೇಳೆ ಎದುರಾದ ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಯಾತ್ರೆಯು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಲ್ಲಿ ಸಾಗುವಾಗ ನನ್ನನ್ನು ಭೇಟಿಯಾದ ಮಕ್ಕಳು ಹಠ ಬಿಡದೇ ನನ್ನನ್ನು ಆ ಶಿಥಿಲವಾಗಿರುವ ಶಾಲೆಗೆ ಕರೆದುಕೊಂಡು ಹೋಗಿ, ಅಲ್ಲಿನ ದುಸ್ಥಿತಿಯ ದರ್ಶನ ಮಾಡಿಸಿದರು. ಕಳೆದ ಎರಡು- ಮೂರು ವರ್ಷಗಳಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಶಿಕ್ಷಕರು ಪಾಠ ಮಾಡುತ್ತಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದರು.
ಆ ಕೂಡಲೇ ನಾನು ಸ್ಥಳದಿಂದಲೇ ದೂರವಾಣಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಜತೆ ಮಾತನಾಡಿದೆ. ನಮ್ಮ ಒತ್ತಾಯಕ್ಕೆ ಸ್ಪಂದಿಸಿದ್ದು, ಆದಷ್ಟು ಬೇಗ ಬಂಗವಾದಿ ಗ್ರಾಮದ ಶಾಲೆಗೆ ನೂತನ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಅಲ್ಲದೆ; ಕೋಲಾರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರೆ ಮಾಡಿ, ಕೂಡಲೇ ಬಂಗವಾದಿ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿಕೊಡಬೇಕಾಗಿ ಸೂಚಿಸಿದ್ದೇನೆ ಎಂದು ಕುಮಾರಸ್ವಾಂಇ ತಿಳಿಸಿದ್ದಾರೆ.
ಪಂಚರತ್ನ ರಥಯಾತ್ರೆ ವೇಳೆ ಎದುರಾದ ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಯಾತ್ರೆಯು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಲ್ಲಿ ಸಾಗುವಾಗ ಬಂಗವಾದಿ ಗ್ರಾಮದ ಸರಕಾರಿ ಶಾಲೆ ಮಕ್ಕಳು ಶಾಲಾ ಕಟ್ಟಡಕ್ಕಾಗಿ ಕಣ್ಣೀರಿಟ್ಟರು, ರಸ್ತೆಯಲ್ಲಿ ಅಡ್ಡಗಟ್ಟಿದರು.1/4#ಪಂಚರತ್ನ_ರಥಯಾತ್ರೆ #Pancharatna_Rathayatre #ಕೋಲಾರ pic.twitter.com/OkdHHiUMzn
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 22, 2022