NEWSದೇಶ-ವಿದೇಶರಾಜಕೀಯ

ಗುಜರಾತ್‌ ಚುನಾವಣೆ: ಆಮ್‌ ಆದ್ಮಿ ಪಾರ್ಟಿ ಪರ ಭಾಸ್ಕರ್‌ ರಾವ್‌ ಮತ ಪ್ರಚಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಸೂರತ್‌: ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಗುಜರಾತ್‌ ಚುನಾವಣೆಯಲ್ಲಿ ಪಕ್ಷದ ಪರ ಬಿರುಸಿನ ಪ್ರಚಾರದಲ್ಲಿ ಭಾಗಿಯಾದ್ದಾರೆ.

ಸೂರತ್‌ ಜಿಲ್ಲೆಯ ಕತಾರ್‌ಗಾಮ್‌ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಗುಜರಾತ್‌ ಎಎಪಿ ರಾಜ್ಯಾಧ್ಯಕ್ಷ ಗೋಪಾಲ್‌ ಇಟಾಲಿಯಾ ಪರ ಭಾಸ್ಕರ್‌ ರಾವ್‌ ಮತಯಾಚನೆ ಮಾಡಿದರು.

ಪ್ರಚಾರದ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಸ್ಕರ್‌ ರಾವ್‌, “ದೆಹಲಿ ಹಾಗೂ ಪಂಜಾಬ್‌ ನಂತರ ಇದೀಗ ಗುಜರಾತ್‌ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿಯು ಗುಜರಾತ್‌ ರಾಜ್ಯವನ್ನು ಅಭಿವೃದ್ಧಿ ಪಡಿಸುವ ಬದಲು, ಇಲ್ಲಿನ ಸಣ್ಣಪುಟ್ಟ ಯೋಜನೆಗಳಿಗೆ ದೇಶಾದ್ಯಂತ ಸುಳ್ಳು ಪ್ರಚಾರ ಪಡೆಯುವುದಕ್ಕೆ ಆದ್ಯತೆ ನೀಡಿದೆ ಎಂದು ಆರೋಪಿಸಿದರು.

ಗುಜರಾತ್‌ ಮಾಡೆಲ್‌ ಕಳಪೆ ಮಾಡೆಲ್‌ ಎಂಬುದು ಜನರಿಗೆ ಅರ್ಥವಾಗುತ್ತಿದ್ದು, ಗುಣಮಟ್ಟದ ಮೂಲಸೌಕರ್ಯಗಳಿಗಾಗಿ ಅವರು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಬಿಜೆಪಿಯ ಹಣಬಲ ಹಾಗೂ ತೋಳ್ಬಲದ ನಡುವೆಯೂ ಆಮ್‌ ಆದ್ಮಿ ಪಾರ್ಟಿಗೆ ಜನಬೆಂಬಲವು ವ್ಯಾಪಕವಾಗಿ ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ವಿವಿಧ ಮಾಧ್ಯಮಗಳ ಇತ್ತೀಚಿನ ಸಮೀಕ್ಷೆಗಳು ಕೂಡ ಇದನ್ನು ದೃಢಪಡಿಸಿವೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ವಲಯ ಉಸ್ತುವಾರಿ ವಿಜಯ್‌ ಶಾಸ್ತ್ರಿಮಠ್‌ ಹಾಗೂ ಪಕ್ಷದ ಮುಖಂಡ ನಿತ್ಯಾನಂದ ಸಾಹು ಭಾಸ್ಕರ್‌ ರಾವ್‌ ಜೊತೆಗಿದ್ದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ