NEWSನಮ್ಮಜಿಲ್ಲೆನಮ್ಮರಾಜ್ಯ

ಕೋಲಾರ: ಸಾರಿಗೆ ನೌಕರರ ಮೊದಲ ಹಂತದ ಸೈಕಲ್‌ ಜಾಥಾಗೆ ತೆರೆ – ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರ ಕೊಟ್ಟ ಭರವಸೆಯಂತೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ವೇತನದ ಆಯೋಗದ ಮಾದರಿಯಲ್ಲಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ಕಳೆದ ಅಕ್ಟೋಬರ್‌ 10ರಂದು ಬಳ್ಳಾರಿಯಿಂದ ಆರಂಭಿಸಿದ ಸೈಕಲ್‌ ಜಾಥಾಗೆ ಶುಕ್ರವಾರ ತೆರೆ ಬಿದ್ದಿದೆ.

ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದ ಸುದ್ದಿ ನೀವು ಒಮ್ಮೆ ನೋಡಿ: http://ಕಲಬುರಗಿ: .27ರಂದು ಮೊಳಗಿತು ಸಾರಿಗೆ ನೌಕರರ ಹೋರಾಟದ ಕಹಳೆ – ಅಧಿಕಾರಿಗಳಲ್ಲಿ ತಲ್ಲಣ

ಇದಕ್ಕೂ ಮುನ್ನಾ ಕೆಎಸ್ಸಾರ್ಟಿಸಿ ನೌಕರರ ಒಕ್ಕೂಟದ ಸಾವಿರಾರು ನೌಕರರು ನಗರದ ಬಸ್‌ ನಿಲ್ದಾಣ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಸೈಕಲ್ ಜಾಥಾ ಹಾಗೂ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ವೆಂಕಟ್‌ರಾಜ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಆ ಬಳಿಕ ನಗರದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್, 2021 ಏಪ್ರಿಲ್‌ನ ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ವಜಾ ಮಾಡಿರುವ ನೌಕರರನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು. ವರ್ಗಾವಣೆ, ಇಂಕ್ರಿಮೆಂಟ್ ಕಡಿತ ಮುಂತಾದ ಶಿಕ್ಷೆಗಳಿಗೆ ಗುರಿಪಡಿಸಿರುವುದನ್ನು ಹಿಂಪಡೆಯಬೇಕು. 2021ರ ಏಪ್ರಿಲ್ 6ರ ಹಿಂದಿನಂತೆ ಯಾಥಾ ಸ್ಥಿತಿ ಕಾಪಾಡಬೇಕೆಂದು ಆಗ್ರಹಿಸಿದರು.

ಸಾರಿಗೆ ನಿಗಮದ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು, ನಾಲ್ಕು ವರ್ಷಗಳಿಗೊಮ್ಮೆ ಆಗುತ್ತಿರುವ ಅವೈಜ್ಞಾನಿಕ ವೇತನ ಪರಿಷ್ಕರಣೆ ಪದ್ಧತಿ ಕೈ ಬಿಟ್ಟು ಸರ್ಕಾರದ ಇಲಾಖೆ ಮತ್ತು ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವಂತೆ ವೇತನದ ಆಯೋಗದ ಮಾದರಿಯಲ್ಲಿ ನಮಗೂ ವೇತನ ನೀಡಬೇಕು ಒತ್ತಾಯಿಸಿದರು.

ಕೂಟದ ಪ್ರಧಾನ ಕಾರ್ಯದರ್ಶಿ ತಿಪ್ಪೆಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಅವರು ಈ ಹಿಂದೆ ಸಾರಿಗೆ ಸಂಸ್ಥೆ ಸಂಘಟನೆಗೆ ನೀಡಿರುವ ಲಿಖಿತ ಭರವಸೆ ಈಡೇರಿಸ ಬೇಕು, ಕಳೆದ 47 ದಿನಗಳಿಂದ ರಾಜ್ಯದ 18 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ಮಾಡಿದ್ದು, ಪ್ರತಿ ಜಿಲ್ಲೆಯಲ್ಲೂ ಅಲ್ಲಿನ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಹಾ ಸಮಾವೇಶ ಹಮ್ಮಿಕೊಂಡು ಸರ್ಕಾರದ ಗಮನಸೆಳೆಯಲಾಗುತ್ತಿದೆ ಎ೦ದರು.

ಕಳೆದ 2020ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ನೀಡಿದ ಲಿಖಿತ ಭರವಸೆ ಎರಡು ವರ್ಷ ಕಳೆಯುತ್ತಾ ಬಂದರೂ ಈಡೇರಿಸಿಲ್ಲ. ವಿಕಾಸಸೌಧದಲ್ಲಿ ಮಂಡಿಸಿದ 9 ಬೇಡಿಕೆಗಳಲ್ಲಿ 5 ಮಾತ್ರ ಈಡೇರಿಸಿದ್ದು, ಉಳಿದ 4 ಬೇಡಿಕೆಗಳಿಗೆ ಆಗ್ರಹಿಸಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದು ನಿರಂತವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.

ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳಾದ ಬಿ.ವಿ.ಶ್ರೀನಿವಾಸಯ್ಯ, ಎನ್.ಕೆ. ಮಂಜುನಾಥ್, ಸಿ.ಶಂಕರಪ್ಪ, ಸೋಮಶೇಖರ್, ಚಿನ್ನಪ್ಪ, ಜಿ.ಎಸ್ .ನಾಗರಾಜ್‌, ಕೂಟದ ರಾಜ್ಯ ಮಹಿಳಾಧ್ಯಕ್ಷೆ ಚಂಪಕಾವತಿ, ಕೃಷ್ಣ ಗುಡುಗುಡಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ನೌಕರರು ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...