ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ IISC, IIT ಮತ್ತು NIT ಮೂಲಕ Artifical Inteligence and Machine Learning ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಮಾಸಿಕ 15.000 ರೂ.ಗಳ ಶಿಷ್ಯವೇತನ /ತರಬೇತಿ ನೀಡುವ ಸಂಬಂಧ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಶಿಷ್ಯವೇತನ ನೀಡಲಾಗುವುದು.
ಆದರೆ, ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಗಳಲ್ಲಿ ಬಿ.ಇ/ಬಿ.ಟೆಕ್ ಕೋರ್ಸ್ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರು.
ಇನ್ನು ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ಬಿ.ಇ/ ಬಿ.ಟೆಕ್ ಕೋರ್ಸ್ಗಳಲ್ಲಿ ಕನಿಷ್ಠ ಶೇ.55% ರಷ್ಟು ಕಡ್ಡಾಯವಾಗಿ ಅಂಕ ಗಳಿಸಿರಬೇಕು. ಕೋರ್ಸ್ ಅವಧಿಯು ಗರಿಷ್ಠ 2 ವಾರಗಳಾಗಿರುತ್ತದೆ.
ಅಭ್ಯರ್ಥಿಯ ಕುಟುಂಬ ಆದಾಯ 5 ಲಕ್ಷ ರೂ.ಗಳನ್ನು ಮೀರಿರಬಾರದು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಸೂಕ್ಷ್ಮ/ ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.
IISc IIT ಮತ್ತು NIT ಸಂಸ್ಥೆಗಳ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯು ಅಭ್ಯರ್ಥಿಗಳು ಶಿಷ್ಯವೇತನ ಪಡೆಯಲು ಅರ್ಹರಲ್ಲ. ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶವಿಲ್ಲ. ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ, ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.
ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ. ಸಂ: 080-29787448 ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...