NEWSನಮ್ಮಜಿಲ್ಲೆರಾಜಕೀಯ

ಸಣ್ಣಪುಟ್ಟ ಗುತ್ತಿಗೆದಾರರ ಕತ್ತು ಹಿಸಕುವ ಕೆಲಸ : ಶಾಸಕ ಪುಟ್ಟರಾಜು ವಿರುದ್ಧ ಆರೋಪ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ಅಧಿಕಾರಿಗಳ ಮೇಲೆ ಒತ್ತಡ ತಂದು ಕಾಮಗಾರಿಗಳನ್ನು ಪ್ಯಾಕೇಜ್‌ಗಳನ್ನಾಗಿ ಪರಿವರ್ತಿಸಿ ತಮ್ಮದೇ ಸಂಸ್ಥೆಯಾದ ಎಸ್‌ಟಿಜಿಗೆ ಅನುಕೂಲ ಮಾಡಿಕೊಡುವ ಮೂಲಕ ಸಣ್ಣ ಗುತ್ತಿಗೆದಾರರ ಒಕ್ಕಲೆಬ್ಬಿಸುತ್ತಿದ್ದಾರೆ ಶಾಸಕ ಸಿ.ಎಸ್.ಪುಟ್ಟರಾಜು ಎಂದು‌ ಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಎನ್.ರವೀಂದ್ರ ಆರೋಪಿಸಿದರು.

ಹೇಮಾವತಿ, ಕಾವೇರಿ ನೀರಾವರಿ ನಿಗಮ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಇಲಾಖೆಗಳಲ್ಲಿ ಸಣ್ಣ ಪುಟ್ಟ ಗುತ್ತಿಗೆದಾರರಿಗೆ ಕೆಲಸ ಸಿಗುತ್ತಿಲ್ಲ. ಇದರಿಂದ ಎರಡು, ಮೂರು ಮತ್ತು ನಾಲ್ಕನೇ ದರ್ಜೆ ಗುತ್ತಿಗೆದಾರರು ಕಂಗಾಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಕಿಡಿಕಾರಿದರು.

ಶಾಸಕರು ಈ ಮೂಲಕ ಸಣ್ಣಪುಟ್ಟ ಗುತ್ತಿಗೆದಾರರ ಕತ್ತು ಹಿಸಕುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಡಿ.5 ರಂದು ಇಂಜಿನಿಯರಿಂಗ್ ವಿಭಾಗದ ಕಚೇರಿ ಗಳನ್ನು ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಪ್ರಶ್ನಿಸಲಾಗುವುದು. ಅಧಿಕಾರಿಗಳು ಯಾವ ಮಾನದಂಡದ ಮೇಲೆ ಕಾಮಗಾರಿಗಳನ್ನು ಕ್ರೂಡೀಕರಿಸಿ ಪ್ಯಾಕೇಜ್ ಮಾಡುತ್ತಿದ್ದಾರೆ ಎಂಬುದಕ್ಕೆ ಅವರಿಂದ ಉತ್ತರ ಪಡೆಯಲಾಗುವುದು ಎಂದರು.

ಕೆಆರ್‌ಐಡಿಎಲ್ ಅಧಿಕಾರಿಗಳು ನಿಗಮದ ವತಿಯಿಂದ ನಿರ್ವಹಿಸುವ ಕಾಮಗಾರಿಗಳನ್ನು ಕಳಪೆ ಮಾಡಿ ಸಿಮೆಂಟ್ ಮತ್ತು ಕಬ್ಬಿಣಗಳನ್ನು ತೆರಿಗೆ ರಹಿತವಾಗಿ ಖಾಸಗಿಯವರಿಗೆ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಜತೆಗೆ ಅಂಬೇಡ್ಕರ್ ಭವನಗಳ ನಿರ್ಮಾಣ ಕಾಮಗಾರಿ ವಿಳಂಬದ ಬಗ್ಗೆ ಮಾಹಿತಿ ನೀಡುವಂತೆ ಪ್ರಶ್ನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ದೇವೇಗೌಡನಕೊಪ್ಪಲು ದೇವೇಗೌಡ, ಹೊಸಕೋಟೆ ವಿಜಯಕುಮಾರ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ