NEWSನಮ್ಮರಾಜ್ಯ

KSRTC: ನೌಕರರ ಮಾರ್ಚ್‌ ತಿಂಗಳ ವೇತನ ಏ.2ರಂದು ಪಾವತಿಸಲು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಈ ಬಾರಿ ಮಾರ್ಚ್‌ ವೇತನವನ್ನು ಏಪ್ರಿಲ್‌ 2ರಂದು ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಮಾರ್ಚ್‌ ತಿಂಗಳ ವೇತನದ ಜತೆಗೆಯಲ್ಲೇ 2023-2024 ನೇ ಸಾಲಿನ ಗಳಿಕೆ ರಜೆ ನಗದೀಕರಣ ಪಾವತಿಸಬೇಕು ಎಂದು ಮಾ.18ರಂದು ಆದೇಶ ಹೊರಡಿಸಿದ್ದಾರೆ.

ಪ್ರತಿ ತಿಂಗಳ ಮೊದಲನೆಯ ದಿನ ಅಂದರೆ 1ರಂದೆ ಸಂಸ್ಥೆಯ ನೌಕರರಿಗೆ ವೇತನ ಪಾವತಿಸಲಾಗುತ್ತಿತ್ತು. ಆದರೆ ಈ ಬಾರಿ ಮಾ.30 ಭಾನುವಾರ, ಮಾ.31ರಂದು ಸಾರ್ವತ್ರಿಕ ರಜೆ ಮತ್ತು  ಏಪ್ರೀಲ್ 1ರಂದು ಬ್ಯಾಂಕ್ ವ್ಯವಹರಿಸದೇ ಇರುವುದರಿಂದ ಮಾರ್ಚ್‌-2025 ರ ಮಾಹೆಯ ವೇತನವನ್ನು ಏಪ್ರೀಲ್2ರಂದು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವೇತನದೊಂದಿಗೆ 2023-2024 ರ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಎಲ್ಲಾ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸೇರಿಸಿ ಪಾವತಿಸಲು ಹಾಗೂ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ಸಿಬ್ಬಂದಿಗಳಿಗೆ ದಿನಾಂಕ 11.04.2025 ರಂದು ಧನಾದೇಶದ ಮೂಲಕ ಪಾವತಿಸಲು ಆದೇಶಿಸಿದ್ದಾರೆ.

ಎಲ್ಲಾ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ/ಕಾರ್ಯ ನಿರ್ವಾಹಕ ಅಭಿಯಂತರರು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಸಂಬಂಧಪಟ್ಟ ನಿರ್ದೇಶಕರು (ಸಿ & ಜಾ), ಎಲ್ಲ ಇಲಾಖಾ ಮುಖ್ಯಸ್ಥರು,  ಉಪ ಮುಖ್ಯ ಲೆಕ್ಕಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಆಪ್ತ ಕಾರ್ಯದರ್ಶಿ ಅವರಿಗೆ ಮಾಹಿತಿಗಾಗಿ ಆದೇಶದ ಪ್ರತಿ ರವಾನಿಸಲಾಗಿದೆ.

Deva
the authorDeva

Leave a Reply

error: Content is protected !!
Latest news
ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್ ವಿದ್ಯುತ್ ಖಾಸಗೀಕರಣ ನಿಲ್ಲಿಸಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ