Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಪತ್ರಕರ್ತರಿಗೆ ಬೆದರಿಕೆ, ಹಲ್ಲೆ ಮಾಡಿದರೆ 50ಸಾವಿರ ರೂ.ದಂಡ, ಐದು ವರ್ಷ ಕಠಿಣ ಶಿಕ್ಷೆ: ಸುಪ್ರೀಂ ಕೋರ್ಟ್ ತೀರ್ಪು

471Views
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಮಾಧ್ಯಮ ಸ್ವಾತಂತ್ರ್ಯ ಕಾಪಾಡುವ ನಿಟ್ಟಿನಲ್ಲಿ, ಪತ್ರಕರ್ತರಿಗೆ ಶ್ರೀರಕ್ಷೆಯಾಗುವ ಮಹತ್ವದ ತೀರ್ಪುನ್ನು ಸುಪ್ರೀಂಕೋರ್ಟ್‌ ನೀಡಿದೆ.

ಸಂವಿಧಾನದ ನಾಲ್ಕನೇ ಅಂಗವೆಂದು ಪರಿಗಣಿಸಲಾಗಿರುವ ಮಾಧ್ಯಮವು ಹೆಚ್ಚು ಸಕ್ರಿಯವಾದಷ್ಟು, ಪ್ರಜಾಪ್ರಭುತ್ವವು ಗಟ್ಟಿಯಾಗಿ ನೆಲೆಯೂರುತ್ತದೆ. ಹೀಗಾಗಿ ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಮಹತ್ವದ್ದಾಗಿದೆ.

ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ, ಯಾರೇ ಆದರೂ ಬೆದರಿಕೆಯೊಡ್ಡಿದರೆ, ಅಪಮಾನ ಮಾಡಿದರೆ ಅಥವಾ ಅವರ ಮೇಲೆ ಹಲ್ಲೆ ಮಾಡಿದರೆ, ಅಂತವರಿಗೆ 50ಸಾವಿರ ರೂಪಾಯಿ ದಂಡ ಹಾಗೂ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಈ ರೀತಿಯ ಭದ್ರತೆ ನೀಡುವುದರಿಂದ ಪತ್ರಕರ್ತರು ಇನ್ನಷ್ಟು ಪ್ರಭಾವ ಬೀರಿ ಕಾರ್ಯನಿರ್ವಹಿಸಬಹುದಾಗಿದೆ ಎಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ನಾಡಿನ ಅನೇಕ ಪತ್ರಕರ್ತರು ಸ್ವಾಗತಿಸಿದ್ದಾರೆ. ಈ ತೀರ್ಪು ಸ್ವಾಗತಾರ್ಹವಾಗಿದೆ ಮತ್ತು ಪತ್ರಕರ್ತರಿಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದ್ದಾರೆ.

ದೇಶಕ್ಕೆ ಕಂಟಕ ಪ್ರಾಯವಾಗಿರುವವರ ವಿರುದ್ಧ, ನೈತಿಕ ಸಮರ ಸಾರುವ ನಿಷ್ಠಾವಂತ ಪತ್ರಕರ್ತರಿಗೆ ಸುಪ್ರೀಂಕೋರ್ಟ್ ತೀರ್ಪು ಶ್ರೀರಕ್ಷೆಯಾಗಿದ್ದು, ಪಾಮಾಣಿಕವಾಗಿ ಸಾಮಾಜಿಕ ಕಾಳಜಿಯಿಂದ ನಾಡಿನ ಸೇವೆ ಮಾಡಲು ಅನುಕೂಲವಾಗಲಿದೆ. ಭ್ರಷ್ಟಾಚಾರದ ವಿರುದ್ಧ, ಕಾನೂನಿನ್ವಯ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ನಾಡಿನಲ್ಲಿರುವ ಸಾಮಾಜಿಕ ಸೈನಿಕರಾಗಿದ್ದಾರೆ.

Editordev
the authorEditordev

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...