NEWSಕೃಷಿನಮ್ಮರಾಜ್ಯ

ನಾವು ಅನ್ನದಾತರು ಭಿಕ್ಷುಕರಲ್ಲ: ಧರಣಿ ನಿರತ ಕಬ್ಬು ಬೆಳೆಗಾರರ ಆಕ್ರೋಶ – ನಾಳೆ ನೋಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಆಹೋ ರಾತ್ರಿ ಧರಣಿಯ 10ನೇ ದಿನವಾದ ಇಂದು ಧರಣಿ ನಿರತರು, ನಾವು ಅನ್ನದಾತರು ಭಿಕ್ಷುಕರಲ್ಲ ಎಂದು ಭಿಕ್ಷಾತಟ್ಟೆ ಹಿಡಿದು ಅಣಕು ಚಳವಳಿ ನಡೆಸಿದರು.

ರಾಜ್ಯದ ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಧರಣಿಯಲ್ಲಿ ಕಬ್ಬು ಎಫ್ಆರ್ಪಿ ದರ ಏರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡಬೇಕು. ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸದೆ ಇರುವುದನ್ನು ಖಂಡಿಸಿದರು.

ರೈತರಿಗೆ ನ್ಯಾಯ ನೀಡುವುದಾಗಿ ಭರವಸೆ ನೀಡಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರ ಬದುಕು ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎನ್ನುವಂತಾಗಿದೆ.

ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರು 7-50 ಕೋಟಿ ಟನ್ ಕಬ್ಬು ಬೆಳೆದು 78 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡಿ, ಕಬ್ಬು ಬೆಳೆದ ರೈತ ಭಿಕ್ಷುಕರಾಗುತ್ತಿದ್ದಾನೆ, ರೈತರ ಮತ ಭಿಕ್ಷೆ ಬೇಡುವ ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದೆ. ವರ್ಷದಲ್ಲಿ 30,000 ಕೋಟಿ ವಹಿವಾಟು ನಡೆಸುವ ರಾಜ್ಯ ಸರ್ಕಾರಕ್ಕೆ 5000 ಕೋಟಿ ರೂ. ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ. ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಿದ್ದರು ಸರ್ಕಾರ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳದೆ, ಪೊಲೀಸರ ಬಲದಿಂದ ಭಂಡತನ ತೋರುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯಕ್ಕಿಂತ ಕಡಿಮೆ ಸಕ್ಕರೆ ಇಳುವರಿ ಬರುವ ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಮಹಾರಾಷ್ಟ್ರದಲ್ಲಿ 3,200 ಗುಜರಾತ್‌ನಲ್ಲಿ 4400 ದರ, ತಮಿಳುನಾಡಿನಲ್ಲಿ ಕಬ್ಬು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳೆ ಬರಿಸುವ ನಿಯಮ ಜಾರಿಯಲ್ಲಿದೆ. ಆಯಾ ರಾಜ್ಯ ಸರ್ಕಾರಗಳೇ ಹೆಚ್ಚುವರಿ ದರ ನಿಗದಿ ಮಾಡಿದ್ದಾರೆ, ಕರ್ನಾಟಕದಲ್ಲಿ ಮಾತಿನ ಮೂಲಕ ರೈತರಿಗೆ ಸಿಹಿ ನೀಡುತ್ತಿದ್ದಾರೆ.

ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಯವರು ರೈತರಿಂದ ಲಗಾಣಿ ಹೆಚ್ಚು ಪಡೆಯುತ್ತಿದ್ದಾರೆ ಕಬ್ಬು ಕಟಾವು 16 ತಿಂಗಳಾಗುತ್ತಿದೆ. ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಟಾವು ಸಾಗಾಣಿಕೆ ವೆಚ್ಚ ಏರಿಕೆ ಮಾಡಿದ್ದಾರೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಚೀಟಿಂಗ್ ಕೇಸ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಸುಲಿಗೆ ತಪ್ಪಿಸಬೇಕು. ಕಬ್ಬು ಕಟಾವು16-18 ತಿಂಗಳು ವಿಳಂಬವಾಗುತ್ತಿದೆ. ಈ ರೀತಿ ಕಟಾವು ಮಾಡಿದ ಕಬ್ಬಿಗೆ ವಿಳಂಬದ ಅವಧಿ ಹಣಕ್ಕೆ ಬಡ್ಡಿ ಸೇರಿಸಿ ಹೆಚ್ಚುವರಿ ದರ ಕೊಡಬೇಕು ಎಂದು ಆಗ್ರಹಿಸಿದರು.

ಬಗರ್ ಹುಕುಂ ಸಾಗುವಳಿ ಹತ್ತಾರು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಅರಣ್ಯ ಭೂಮಿಯನ್ನು ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪಟ್ಟಾವನ್ನು ನೀಡಬೇಕು. ಕಾಡಂಚಿನಲ್ಲಿ ಪ್ರಾಣಿಗಳ ಹಾವಳಿ ತಪ್ಪಿಸಿ, ಕಾಡು ಪ್ರಾಣಿಗಳಿಂದ ಆಗುವ ಬೆಳೆ ಹಾನಿ ಪರಿಹಾರ ವೈಜ್ಞಾನಿಕವಾಗಿ ನಷ್ಟವನ್ನು ಭರಿಸಬೇಕು ಎಂದು ಒತ್ತಾಯಿಸಿದರು.

ಇನ್ನು ನಿನ್ನೆ ಇಂದಿನವರೆಗೆ ಸರ್ಕಾರಕ್ಕೆ ಗಡುವುನೀಡಿದ ಕಬ್ಬು ಬೆಳೆಗಾರರ ಸಂಘ ನಾಳೆ ದೊಟ್ಟಮಟ್ಟದಲ್ಲಿ ಹೋರಾಟ ನಡೆಸಲು ಸಜ್ಜಾಗಿದೆ. ರೈತರ ಹೋರಾಟ ಯಾವ ಮಟ್ಟ ಮುಟ್ಟುತ್ತದೋ ಎಂಬ ಭಯದಲ್ಲಿ ಸರ್ಕಾರ ಪೊಲೀಸರನ್ನು ಹೆಚ್ಚಾಗಿ ನಿಯೋಜನೆ ಮಾಡಿದೆ. ಹೀಗಾಗಿ ನಾಳೆ ರೈತರ ಹೋರಾಟ ಯಾವ ಹಂತ ತಲುಪುತ್ತದೋ ಕಾದು ನೋಡಬೇಕು.

ರೈತರತ್ನ ಕುರುಬೂರು ಶಾಂತಕುಮಾರ್, ಸುರೇಶ್ ಮ. ಪಾಟೀಲ್, ಅತ್ತಹಳ್ಳಿ ದೇವರಾಜ್, ಅಶೋಕಮೇಟಿ, ಗಜೇಂದ್ರ ಸಿಂಗ್, ಬರಡನಪುರ ನಾಗರಾಜ್, ವೆಂಕಟಲಕ್ಷ್ಮಿ, ದೇವಮಣ್ಣಿ, ಕೆಂಡಗಣಸ್ವಾಮಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ