Please assign a menu to the primary menu location under menu

CrimeNEWSನಮ್ಮಜಿಲ್ಲೆ

ತಿ.ನರಸೀಪುರ: ತಾಲೂಕಿನಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿ ಪಡೆದಿದೆ.

ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಚಿರತೆ ದಾಳಿಗೆ ಬಲಿಯಾದ ಯುವತಿ. ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಭಾರಿ ಮನವಿ ಮಾಡಿದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಕಳೆದುಕೊಂಡಂತಾಗಿದೆ.

ಸಾರ್ವಜನಿಕರ ಆಕ್ರೋಶ: ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದು, ಈಗ ಯುವತಿಯನ್ನು ಬಲಿ ಪಡೆದಿದೆ. ನಿರಂತರವಾಗಿ ಚಿರತೆ ದಾಳಿ ಮಾಡುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲತೆ ಕಂಡಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ