Wednesday, October 30, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಯಾಚೇನಹಳ್ಳಿ: ಮನೆಯ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಮೇಕೆ ಕೊಂದು ಚಿರತೆ ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ಇಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಚಿರತೆಯೊಂದು ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಯೊಂದನ್ನು ಕೊಂದು ಪರಾರಿಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೈಸ್‌ಮಿಲ್‌ ಬಳಿ ಇಳಿರುವ ಹೊಟ್ಟೆ ಈರ ಸತೀಶ್‌ ಎಂಬುವರ ಮನೆಯ ಕೊಟ್ಟಿಯಲ್ಲಿ ಕಟ್ಟಿಹಾಕಿದ್ದ ಮೇಕೆಯ ಕುತ್ತಿಗೆ ಸೀಳಿ ಸಾಯಿಸಿದ್ದು ಬಳಿಕ ಅದನ್ನು ಹೊತ್ತೊಯ್ಯಲು ಯತ್ನಿಸಿದೆ ಅಷ್ಟರಲ್ಲಿ ಉಳಿದ ಮೇಕೆಗಳು ಅರುಚಾಡಿದ್ದನ್ನು ಕೇಳಿಸಿಕೊಂಡು ಕೊಟ್ಟಿಗೆಗೆ ಬಂದು ನೋಡಿದಾಗ ಚಿರತೆ ಕಾಣಿಸಿದೆ.

ಅದನ್ನು ನೋಡಿ ಗಾಬರಿಗೊಂಡ ಮೇಕೆ ಮಾಲೀಕನು ಅರುಚಿಕೊಂಡಿದ್ದರಿಂದ ಅಕ್ಕಪಕ್ಕದವರು ಬರುವಷ್ಟರಲ್ಲಿ ಚಿರತೆ ಪರಾರಿಯಾಗಿದೆ.

ಒಟ್ಟಾರೆ ಬನ್ನೂರು ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಮನೆಯ ಕೊಟ್ಟಿಗೆಯಲ್ಲಿ ಕಟ್ಟಿಹಾಕಿರುವ ಸಾಕು ಪ್ರಾಣಿಗಳನ್ನು ಬಿಡುತ್ತಿಲ್ಲ. ಇದರಿಂದ ಗ್ರಾಮಸ್ಥರು ಸಂಜೆ 7 ನಂತರ ಮನೆಯಿಂದ ಹೊರಬರುವುದಕ್ಕೂ ಹೆದರುವಂತಾಗಿದೆ.

ಈ ನಡುವೆ ಇದೇ 5 ರಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಕಬ್ಬು ಕಟಾವು ಮಾಡುವಂತೆ ಆದೇಶ ನೀಡಿದ್ದು, ಚಿರತೆಗಳನ್ನು ಸೆರೆ ಹಿಡಿಯುವುದಕ್ಕೆ ಕಬ್ಬು ಬೆಳೆ ಬೆಳೆದು ನಿಂತಿರುವುದರಿಂದ ತೊಂದರೆ ಆಗುತ್ತಿದೆ. ಹೀಗಾಗಿ ಮೊದಲು ಕಬ್ಬು ಕಟಾವು ಮಾಡಿ ಎಂದು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೂ ಆದೇಶ ನೀಡಿದ್ದಾರೆ.

ಇನ್ನು ಬನ್ನೂರು ಹೋಬಳಿಯ ಬಸವನಹಳ್ಳಿ ಬಳಿಯ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಸಿಕ್ಕಿದ್ದು, ಅಲ್ಲಿ ಕಬ್ಬು ಕಟಾವು ಮಾಡುತ್ತಿದ್ದವರು ಅವುಗಳನ್ನು ಅರಣ್ಯ ಅಧಿಕಾರಿಗಳು ಬಂದು ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Advt

Leave a Reply

error: Content is protected !!
LATEST
ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ