Wednesday, October 30, 2024
NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಕಬ್ಬಿಗೆ ಹೆಚ್ಚುವರಿ 50 ರೂ. ಆದೇಶ ಸುಟ್ಟು ಆಕ್ರೋಶ ಹೊರಹಾಕಿದ ರೈತರು – ಕಬ್ಬಿನ ಪಿಂಡಿ ಹೂತ್ತು ವಿನೂತನ ಪ್ರತಿಭಟನೆ

17ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಬ್ಬಿಗೆ ಹೆಚ್ಚುವರಿ 50 ರೂ. ಆದೇಶ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ರೈತರು 17ನೇ ದಿನದ ಹೋರಾಟ ನಿರತರು ತಲೆ ಮೇಲೆ ಕಬ್ಬಿನ ಪಿಂಡಿ ಹೂತ್ತು ಪ್ರತಿಭಟಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಕಬ್ಬು ಬೆಳೆಗಾರ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದಿಗೆ 17ನೇ ದಿನಕ್ಕೆ ಕಾಲಿಟ್ಟಿದೆ. ಹೀಗಾಗಿ ಇಂದು ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್ಆರ್ ಪಿ ದರಕೆ ಹೆಚ್ಚುವರಿಯಾಗಿ ಟನ್‌ಗೆ 50 ರೂ. ನೀಡಲು ಹೊರಡಿಸಿರುವ ಆದೇಶ ಧಿಕ್ಕರಿಸುತ್ತೇವೆ ಎನ್ನುತ್ತಾ ತಲೆ ಮೇಲೆ ಕಬ್ಬಿನ ಜಲ್ಲೆಗಳನ್ನು ಹೊತ್ತು ಆದೇಶವನ್ನು ಸುಟ್ಟು ಬೂದಿ ಮಾಡಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ನಂತರ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿ ಹಣ ಕೊಡಿಸಲು ಸರ್ಕಾರಕ್ಕೆ ಧೈರ್ಯವಿಲ್ಲದಿದ್ದರೆ ಕಬ್ಬು ಬೆಳೆಗಾರರ ವಹಿವಾಟಿನಿಂದ ಸರ್ಕಾರಕ್ಕೆ ಬರುವ ತೆರಿಗೆ 5,000 ಕೋಟಿ ಹಣದಿಂದ ಹೆಚ್ಚುವರಿ ಹಣ ನೀಡಲಿ, ಹಿಂದೆ ಬೆಳಗಾವಿ ಅಧಿವೇಶನದ ವೇಳೆ ರೈತನೊಬ್ಬ ಪ್ರಾಣ ಕಳೆದುಕೊಂಡಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಟನ್ ಗೆ 160 ರೂ. ಹೆಚ್ಚುವರಿ ಹಣ ಘೋಷಣೆ ಮಾಡಿ 1600 ಕೋಟಿ ರೂ.ಗಳನ್ನು ರೈತರಿಗೆ ನೀಡಿದ್ದಾರೆ.

ಅದರಂತೆ ಪ್ರಸಕ್ತ ಸರ್ಕಾರವು ನೀಡಲಿ ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚವನ್ನು ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 200 ರಿಂದ 300 ರೈತರ ಹಣದಲ್ಲಿ ಮುರಿದು ಕೊಳ್ಳುತ್ತಿದ್ದಾರೆ, ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡಬೇಕು ಆಗ್ರಹಿಸಿದರು.

ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನ ಸಕ್ಕರೆ ಕಾರ್ಖಾನೆಗಳೆ ಪರೀಕ್ಷೆ ಮಾಡಿ ವರದಿ ನೀಡುವ ಕಾರಣ ರೈತರಿಗೆ ವಂಚನೆಯಾಗುತ್ತಿದೆ ಇದನ್ನು ತಪ್ಪಿಸಲಿ. ಕಬ್ಬಿನಿಂದ ಬರುವ ಯಥನಾಲ್ ಉತ್ಪನ್ ದ ಲಾಭಾಂಶ ಮಾತ್ರ ಏಕೆ, ಮೊಲಾಸಿಸ್ ಬಗ್ಯಾಸ್ ಮಡ್ಡಿ ಸಕ್ಕರೆ ಉತ್ಪನ್ನಗಳ ಲಾಭವನ್ನು ಪರಿಗಣಿಸಿ ಉತ್ಪಾದನೆಗೆ ತಗಲುವ ಖರ್ಚನ್ನ ಕಳೆದು ರೈತರಿಗೆ ಹೆಚ್ಚುವರಿ ಹಣ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಎತನಾಲ್ ನಿಂದ ಹೆಚ್ಚುವರಿ 50 ರೂ. ಕೊಡುತ್ತೇವೆ ಎಂದರೆ ರೈತರಿಗೆ ಕೊಡುವುದು ಭಿಕ್ಷೆಯಲ್ಲ, ಕಬ್ಬು ಬೆಳೆದ ರೈತ ಸಾಲದ ಬಲೆಯಲ್ಲಿ ಬೀಳುತ್ತಿದ್ದಾನೆ, ಕಬ್ಬುನುರಿಸುವ ಕಾರ್ಖಾನೆ ಮಾಲೀಕ ಪ್ರತಿವರ್ಷ ಹೊಸ ಹೊಸ ಕಾರ್ಖಾನೆ ಮಾಡುತ್ತಿದ್ದಾನೆ, ಯಥನಾಲ್ ಉತ್ಪಾದನೆ ಮಾಡುವ ಕಾರ್ಖಾನೆಗಳ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 50 ರೂ. ಎನ್ನುವ ನೀತಿ ರೈತರನ್ನು ಹೊಡೆದಾಳುವ ಕ್ರಮವಾಗಿದೆ ಎಂದು ಕಿಡಿಕಾರಿದರು.

ಇದೆ ತಿಂಗಳ ಹನ್ನೊಂದನೇ ತಾರೀಕು ತಮಿಳುನಾಡು, ಕೇರಳ, ಆಂಧ್ರ, ರಾಜ್ಯಗಳ ರೈತ ಮುಖಂಡರು ಬೆಂಗಳೂರಿನ ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಲಿದ್ದಾರೆ ಅನಿವಾರ್ಯವಾದರೆ ಸಾವಿರಾರು ಸಂಖ್ಯೆ ರೈತರು ಬೆಂಗಳೂರಿಗೆ ಬರಲು ತೀರ್ಮಾನಿಸಿದ್ದಾರೆ ಎಂದ ಅವರು, ಕಬ್ಬು ಬೆಳೆಗಾರರ ರೈತರ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲಿ ಎಂಬುವುದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಒತ್ತಾಯವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಉಳುವಪ್ಪ ಬಳಗೇರ, ರಮೇಶ್ ಹೂಗಾರ್, ಜಗದೀಶ್ ಪಾಟೀಲ್, ಸುರೇಶ್ ಮಾ ಪಾಟೀಲ್, ಅತ್ತಹಳ್ಳಿ ದೇವರಾಜ್, ಬರಡನ್ ಪುರ ನಾಗರಾಜ್, ಶರಣು ಬಿಲ್ಲದ್ ಮುಂತಾದವರಿದ್ದರು.

Leave a Reply

error: Content is protected !!
LATEST
ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ