NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಸಾರಿಗೆ ನೌಕರರಿಗೆ ವೇತನ ಆಯೋಗ ಮಾದರಿ ಪಗಾರ ನೀಡಲು ಅಧಿವೇಶನದಲ್ಲಿ ಧ್ವನಿ ಎತ್ತಿ: ಸಚಿವ ಪ್ರಭು ಚವ್ಹಾಣರಿಗೆ ಕೂಟ ಮನವಿ

ವಿಜಯಪಥ ಸಮಗ್ರ ಸುದ್ದಿ

ಔರಾದ: ಬೀದರ್‌ ವಿಭಾಗದ ಸಾರಿಗೆ ನೌಕರರ ಕೂಟದ ವತಿಯಿಂದ ಪಶು ಸಂಗೋಪನಾ ಸಚಿವರು ಹಾಗೂ ಔರಾದ ಶಾಸಕ ಪ್ರಭು ಚವ್ಹಾಣ ಅವರಿಗೆ ಸಾರಿಗೆ ನೌಕರರಿಗೆ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಿಸುವ ಬಗ್ಗೆ ಮತ್ತು 2021ರ ಏಪ್ರಿಲ್‌ ನಡೆದ ಮುಷ್ಕರದ ಸಮಯದಲ್ಲಿ ಆಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ವಿನಂತಿ‌ ಮನವಿ ಸಲ್ಲಿಸಲಾಯಿತು.

ಶುಕವಾರ (ಇಂದು) ಸಚಿವರನ್ನು ಔರಾದ್‌ನಲ್ಲಿ ಭೇಟಿಯಾದ ಕೂಟದ ಪದಾಧಿಕಾರಿಗಳು ಅಧಿವೇಶನದಲ್ಲಿ ನಮ್ಮಪರ ಸರ್ಕಾರದ‌ ಗಮನ ಸೆಳೆಯ ಬೇಕು ಎಂದು ಕೇಳಿಕೊಂಡರು. ಆ ವೇಳೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.

ಕೂಟದ ಪದಾಧಿಕಾರಿಗಳು ಸಲ್ಲಿಸಿದ ಮನವಿ ಪತ್ರದಲ್ಲಿ ಇರುವ ಬೇಡಿಕೆಗಳು: ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳವುದು, ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ ಹಾಗೂ ಇತರೆ ಶಿಕ್ಷೆಗಳನ್ನು ಯಾವುದೆ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡಿ, ದಿನಾಂಕ: 06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ, ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ನೀಡುವುದು. ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ಸರ್ಕಾರದ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಳ್ಳುವುದು.

3) ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳ ಸಾರಿಗೆ ನೌಕರರ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯುವುದು.

4) ಸಾರಿಗೆ ನಿಗಮಗಳಲ್ಲಿ ಕೂಡಲೆ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು, (1992 ನಂತರ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿರುವುದಿಲ್ಲ)

5) ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಖಾಸಗಿಯವರಿಗೆ ವಹಿಸಿರುವುದು, ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು ಮತ್ತು ಕೆಲವು ಮಾರ್ಗಗಳನ್ನು ಖಾಸಗಿ ವಾಹನಗಳ ಚಾಲನೆಗೆ ಅನುಮತಿ ನೀಡಿ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣದ ಮೂಲಕ ರಾಜ್ಯದ ಯುವಕರಿಗೆ ಮತ್ತಷ್ಟು ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿ ಮಾಡುವ ಯೋಜನೆಯನ್ನು ಈ ಕೂಡಲೆ ಕೈ ಬಿಡುವಂತೆ ನೌಕರರ ಕೂಟದ ಪದಾಧಿಕಾರಿಗಳು ಮನವಿ ಮಾಡಿದರು.

ಬೀದರ್‌ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಬಸವರಾಜ ಚಾಮರೆಡ್ಡಿಮ ಖಜಾಂಚಿ ಶರಣಪ್ಪಾ ಬೆಂಕಿ, ಸಂಘಟನಾ ಕಾರ್ಯದರ್ಶಿ ಶಾಮಪ್ಪಾ, ಔರಾದ್‌ ಘಟಕದ ಪದಾಧಿಕಾರಿಗಳಾದ ಗಣಪತಿ, ಬಸವರಾಜ , ವಿಶ್ವನಾಥ ಹಾಗೂ ಹಲವು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...