NEWSನಮ್ಮರಾಜ್ಯರಾಜಕೀಯ

ವರ್ಗಾವಣೆ: ರಾಜ್ಯ ಸರ್ಕಾರದ ಕುತಂತ್ರಕ್ಕೆ ಬ್ರೇಕ್‌ ಹಾಕಲು ಚುನಾವಣಾ ಆಯೋಗಕ್ಕೆ ಎಎಪಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಧಿಕಾರಿಗಳನ್ನು ತಾತ್ಕಾಲಿಕವಾಗಿ ವರ್ಗಾವಣೆ, ಮರುವರ್ಗಾವಣೆ ಮಾಡುವ ಮೂಲಕ ಚುನಾವಣಾ ಆಯೋಗ ಹೊರಡಿಸಿರುವ ವರ್ಗಾವಣೆ ನೀತಿಯ ಆಶಯಕ್ಕೆ ಧಕ್ಕೆಯಾಗುವಂತೆ ರಾಜ್ಯ ಸರ್ಕಾರ ಕುತಂತ್ರ ಮಾರ್ಗ ಅನುಸರಿಸುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಚುನಾವಣಾ ಆಯೋಗಕ್ಕೆ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೃಥ್ವಿ ರೆಡ್ಡಿ, ಅಕ್ರಮಗಳನ್ನು ತಡಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗಷ್ಟೇ ವರ್ಗಾವಣೆ ನೀತಿಯನ್ನು ಪ್ರಕಟಿಸಿದೆ. ಇದರ ಅನ್ವಯ ಒಂದೇ ಜಿಲ್ಲೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಚುನಾವಣೆಯೊಂದಿಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಬೇರೆ ಜಿಲ್ಲೆಗೆ ವರ್ಗಾವಣೆ ಆಗಬೇಕಿರುತ್ತದೆ. ಆದರೆ ರಾಜ್ಯ ಸರ್ಕಾರವು ಕುತಂತ್ರ ಮಾರ್ಗ ಅನುಸರಿಸಿ, ವರ್ಗಾವಣೆ ನೀತಿಯ ಆಶಯವನ್ನೇ ಬುಡಮೇಲೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರವು ಅಧಿಕಾರಿಗಳನ್ನು ಬೇರೆ ಜಿಲ್ಲೆಗೆ ತಾತ್ಕಾಲಿಕವಾಗಿ ವರ್ಗಾಯಿಸಿ, ಮತ್ತೆ ಮೊದಲಿದ್ದ ಜಿಲ್ಲೆಗೆ ಮರುವರ್ಗಾವಣೆ ಮಾಡುತ್ತಿರುವುದು ಕಂಡುಬರುತ್ತಿದೆ. ಈ ಮೂಲಕ ಅವರು ಮೂರು ವರ್ಷದಿಂದ ಒಂದೇ ಕಡೆ ಇಲ್ಲವೆಂದು ಸಾಬೀತುಪಡಿಸಿ, ಅವರನ್ನು ಮೊದಲಿದ್ದ ಜಿಲ್ಲೆಯಲ್ಲೇ ಉಳಿಸಿಕೊಳ್ಳಲು ಸರ್ಕಾರ ಮುಂದಾಗುತ್ತಿದೆ. ಸರ್ಕಾರದ ಇಂತಹ ಕುತಂತ್ರ ಮಾರ್ಗದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಆಮ್‌ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, ಚಿಲುಮೆ ಸಂಸ್ಥೆಯ ಮೂಲಕ ಮತದಾರರ ಪಟ್ಟಿಗೆ ಸಂಬಂಧಿಸಿ ಬಿಜೆಪಿಯು ಅಕ್ರಮ ನಡೆಸಿರುವುದು ತನಿಖೆಯಿಂದ ಸಾಬೀತಾಗುವ ಹಂತದಲ್ಲಿದೆ. ಹಣಬಲ, ತೋಳ್ಬಲ, ಅಧಿಕಾರಬಲ ಬಳಸಿಕೊಂಡು ಕೂಡ ಬಿಜೆಪಿ ಹಲವು ರೀತಿಯ ಅಕ್ರಮ ನಡೆಸುತ್ತದೆ. ಇಷ್ಟೆಲ್ಲ ಮಾಡಿಯೂ ಚುನಾವಣೆಯಲ್ಲಿ ಸೋತರೆ, ಆಪರೇಷನ್‌ ಕಮಲವೆಂದು ಮತ್ತೊಂದು ಅಕ್ರಮವನ್ನು ಬಿಜೆಪಿ ಮಾಡುತ್ತದೆ. ಈಗ ಇವುಗಳಿಗೆ ಮತ್ತೊಂದು ಸೇರ್ಪಡೆ ಎಂಬಂತೆ, ಬಿಜೆಪಿ ಸರ್ಕಾರವು ವರ್ಗಾವಣೆಯಲ್ಲಿ ಅಕ್ರಮ ಮಾಡುತ್ತಿದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಬ್ರಿಜೇಶ್‌ ಕಾಳಪ್ಪ, ಜಗದೀಶ್‌ ವಿ. ಸದಂ, ಬಿ.ಟಿ.ನಾಗಣ್ಣ, ಚನ್ನಪ್ಪಗೌಡ ನೆಲ್ಲೂರು, ಸುರೇಶ್‌ ರಾಥೋಡ್‌ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ