CrimeNEWSನಮ್ಮಜಿಲ್ಲೆ

ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷವಿತ್ತು 4 ವರ್ಷ- ಮೃತರ ಸ್ಮರಣೆ

ವಿಜಯಪಥ ಸಮಗ್ರ ಸುದ್ದಿ

ಹನೂರು : ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ‌ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಆ ಒಂದು ಭೀಕರ ಘಟನೆಗೆ ‌ನಡೆದು ನಾಲ್ಕು ವರ್ಷವಾದ‌ ಹಿನ್ನೆಲೆ‌ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ‌ ನೇತೃತ್ವದಲ್ಲಿ‌ ಸಂತಾಪ ಸೂಚಿಸಲಾಯಿತು.

ದೇವಿಯ ದರ್ಶನಕ್ಕೆ ಬಂದು ಪ್ರಸಾದ ಸ್ವೀಕರಿಸಿ ಪ್ರಾಣ ಬಿಟ್ಟವರ ಸಂಖ್ಯೆ 17. ಹಾಗೆಯೇ ಸಂತ್ರಸ್ತರಾದವರು 129 ಮಂದಿ. ಅಂದು ಸಂತ್ರಸ್ತರಾದವರ ಪರಿಸ್ಥಿತಿ ಇಂದಿಗೂ ಅತಂತ್ರವಾಗಿಯೇ ಇದೆ. ಇವತ್ತಿಗೂ 2018ರ ಡಿಸೆಂಬರ್ 14ರ ಆ ದುರಂತದ ಕರಾಳ ನೆನಪು ಎಲ್ಲರಲ್ಲಿ‌ ಕಹಿಯಾಗಿ ಉಳಿದಿದೆ. ಯಾರದೋ ಕಿಚ್ಚಿಗೆ ಬಲಿಯಾದ ಅಮಾಯಕ ಜೀವಗಳು ಕಣ್ಣ ಮುಂದೆ ಬರುತ್ತವೆ.

ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಟ್ರಸ್ಟ್ ರಚನೆಯಾಯಿತು. ಆ ಟ್ರಸ್ಟ್ ಗೆ ಅಧ್ಯಕ್ಷರಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವ ಸ್ವಾಮೀಜಿಯನ್ನು ನೇಮಕ ಮಾಡಲಾಗಿತ್ತು.

ಏಳೆಂಟು ಮಂದಿ ಟ್ರಸ್ಟಿಗಳಿದ್ದರು. ಇದೆಲ್ಲದರ ನಡುವೆ ಟ್ರಸ್ಟ್‌ನ ಮ್ಯಾನೇಜರ್ ಪತ್ನಿ ಅಂಬಿಕಾಗೂ ಅಧ್ಯಕ್ಷ ಇಮ್ಮಡಿ ಮಹದೇವ ಸ್ವಾಮಿಗೂ ನಂಟು ಇದ್ದಿದ್ದರಿಂದಾಗಿ ಆಕೆಯೇ ಟ್ರಸ್ಟ್‌ನ ಅಧ್ಯಕ್ಷಳಂತೆ ವರ್ತಿಸಲು ಶುರು ಮಾಡಿದ್ದಳು. ದಿನಕಳೆದಂತೆ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಆಡಳಿತದ ಅಧಿಕಾರ ಹಿಡಿಯಲು ಹಾತೊರೆಯುತ್ತಿದ್ದಳು. ಇದಕ್ಕೆ ಬೆಂಗಾವಲಾಗಿ ನಿಂತಿದ್ದು ಬೃಹನ್ಮಠದ ಕಿರಿಯ ಇಮ್ಮಡಿ ಸ್ವಾಮೀಜಿ ಇದೇ ದುರಂತಕ್ಕೆ ಕಾರಣವಾಯಿತು.

ಮಾಸುವುದಿಲ್ಲ ಆ ದುರಂತದ ಕ್ಷಣ: ಪ್ರಸಾದಕ್ಕೆ ವಿಷ ಬೆರೆಸಿ ಒಂದಷ್ಟು ಮಂದಿಗೆ ಆರೋಗ್ಯ ಏರುಪೇರಾಗಿ ದೇವಸ್ಥಾನದ ಟ್ರಸ್ಟ್‌ಗೆ ಕೆಟ್ಟ ಹೆಸರು ತರಬೇಕೆಂಬುದು ಅವರ ಇರಾದೆಯಾಗಿತ್ತು. ಹೀಗಾಗಿಯೇ ಅವರು ಟೊಮೋಟೋ ಬಾತ್ ಮಾಡಿ ಅದರಲ್ಲಿ ಕ್ರಿಮಿನಾಶಕ ಬೆರೆಸಿ ಭಕ್ತರಿಗೆ ಹಂಚಿದ್ದರು. ಆದರೆ ಅಂದು ಆಗಿದ್ದೇ ಬೇರೆ. ವಿಷಕ್ಕೆ 17 ಮಂದಿ ಅಮಾಯಕರು ಪ್ರಾಣ ಬಿಟ್ಟರು. 129 ಮಂದಿ ಪ್ರಾಣಾಪಾಯದಿಂದ ಪಾರಾದರೂ ಒಂದಲ್ಲ ಒಂದು ತೊಂದರೆಯಿಂದ ಬಳಲುತ್ತಿದ್ದಾರೆ.

ಇಂದಿಗೂ ಈ ದೇವಾಲಯದ ಸುತ್ತಲಿನ ಗ್ರಾಮಗಳಾದ ಬಿದರಳ್ಳಿ, ಮಾರ್ಟಳ್ಳಿ, ಸುಳ್ವಾಡಿ, ಎಂ.ಜಿ.ದೊಡ್ಡಿ ಹೀಗೆ ಹಲವು ಗ್ರಾಮಗಳ ಜನ ಆ ದುರಂತದ ಕ್ಷಣಗಳನ್ನು ನೆನಪಿಸಿಕೊಂಡು ಕಣ್ಣೀರಿಡುತ್ತಿದ್ದಾರೆ ಎಂದು ಪೆದ್ದನಪಾಳ್ಯ ಮಣಿ ಕಂಬನಿ‌ ಮೀಡಿದರು.‌

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?