CRIMEಬೆಂಗಳೂರು

ಚಾಲಕನ ನಿಯಂತ್ರಣ ತಪ್ಪಿ, ಐರಾವತ, ಲಾರಿ, ಕಾರು, ಆಟೋ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ಒಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐರಾವತ ಬಸ್‌ ಬಳಿಕ ಕಾರು, ಆಟೋ, ಲಾರಿ ಹಾಗೂ ಬೈಕ್‌ ಡಿಕ್ಕಿ ಹೊಡೆದಿರುವ ಘಟನೆ ಇಂದು ಮುಂಜಾನೆ ಮೈಸೂರು ರಸ್ತೆಯಲ್ಲಿ ಜರುಗಿದೆ.

ಶನಿವಾರ ಮುಂಜಾನೆ (ಮಾ.15) 5ಗಂಟೆ ಸುಮಾರಿಗೆ ನಗರದ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಲ್ದಾಣ ಸಮೀಪ ಈ ಅವಘಡ ಸಂಭವಿಸಿದ್ದು, ಅಪಘಾತದಿಂದ ಆಟೋ ಸಂಪೂರ್ಣ ಅಪ್ಪಚ್ಚಿಯಾಗಿದೆ.

ಕ್ಯಾಂಟರ್ ಮೈಸೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಿಂತಿದ್ದ ಕಾರು, ಆಟೋ, ಬೈಕ್‍ಗೆ ಡಿಕ್ಕಿಯಾಗಿದೆ. ಅಲ್ಲದೆ ಡಿಕ್ಕಿ ಹೊಡೆದುಕೊಂಡೆ ಬಂದು ಬಂದಿದ್ದು, ಈ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಹೊರಬರುತ್ತಿದ್ದ ಐರಾವತ ಬಸ್‌ಸಹ ಡಿಕ್ಕಿಹೊಡೆದಿದೆ. ಬಳಿಕ ಲಾರಿಯೊಂದಕ್ಕೆ ಗುದ್ದಿ ಕ್ಯಾಂಟರ್ ನಿಂತಿದೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಡಿಕ್ಕಿಯ ರಭಸಕ್ಕೆ ಕ್ಯಾಂಟರ್‌ನ ಮುಂಭಾಗ ಜಖಂಗೊಂಡಿದ್ದು, ಗಾಯಗೊಂಡಿದ್ದ ಕ್ಯಾಂಟರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕ್ಯಾಂಟರ್ ಚಾಲಕ ಕುಡಿದು ವಾಹನ ಚಲಾಯಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...