NEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣಸೌಧದ ಎದುರು ಗ್ರಾಪಂ ನೌಕರರ ಅನಿರ್ದಿಷ್ಟಾವಧಿ ಧರಣಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್ ಡಿ ಪಿ ಆರ್) ರಾಜ್ಯ ಸಮಿತಿ ಇಂದಿನಿಂದ ( ಬೆಳಗಾವಿ ಅಧಿವೇಶನ ) ಬೃಹತ್‌ ಹೋರಾಟ ಹಮ್ಮಿಕೊಂಡಿದೆ.

ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಾದ ನಾವು ಕಳೆದ ಎಂಟು ವರ್ಷಗಳಿಂದ ಪಂಚಾಯಿತಿ ನೌಕರರುಗಳೇ ಸೇರಿ ಸಂಘಟಿತರಾಗಿ ಮಾತೃ ಇಲಾಖೆಯ ಗೌರವಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಯಾವುದೇ ಹೋರಾಟ ಮುಷ್ಕರಗಳಲ್ಲಿ ಸೇರದೆ ನೇರವಾಗಿ ಸರ್ಕಾರ, ಇಲಾಖಾ ಸಚಿವರು ಹಾಗೂ ಇಲಾಖಾ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮೂಲಕ ನಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೇಡಿಕೆಗಳನ್ನು ಸಲ್ಲಿಸುತ್ತಾ ಬಂದಿರುತ್ತೇವೆ.

ಅದರಂತೆ ಹಲವಾರು ಬಾರಿ ಸಂಘಟನೆಯ ಮೂಲಕ ಮನವಿಗಳನ್ನು ಸಲ್ಲಿಸಲಾಗಿದೆ. ಅದಲ್ಲದೆ ಈ ಬಗ್ಗೆ ನೂರಾರು ಬಾರಿ ಸರ್ಕಾರಕ್ಕೆ, ಇಲಾಖೆಗೆ ಮತ್ತು ಇಲಾಖಾ ಸಚಿವರಿಗೆ ಮನವಿಗಳನ್ನು ಸಲ್ಲಿಸಿದರೂ ಸಹ ಬಡ ನೌಕರರ ಸಮಸ್ಯೆಗಳಿಗೆ ಇಲ್ಲಿಯವರೆಗೂ ಯಾವುದೇ ರೀತಿಯ ಸ್ಪಂದನೆ ಸರ್ಕಾರದಿಂದ ಮತ್ತು ಇಲಾಖೆಯಿಂದ ಸಿಕ್ಕಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುತ್ತಾರೆ ಎಂದು ಸರ್ಕಾರದ ಮೇಲೆ ಅಪರವಾದ ವಿಶ್ವಾಸ ಇದ್ದ ಕಾರಣ ಯಾವುದೇ ಹೋರಾಟಕ್ಕೆ ಇಲ್ಲಿಯವರೆಗೂ ಸಂಘಟನೆಯ ಮೂಲಕ ಕರೆ ನೀಡಿರಲಿಲ್ಲ.

ಪ್ರಸ್ತುತ ಕಾಲಘಟ್ಟದಲ್ಲಿ ಗ್ರಾಮ ಪಂಚಾಯಿತಿ ನೌಕರರು ತಮ್ಮ ಮೂಲಭೂತ ಬೇಡಿಕೆಗಳಿಗಾಗಿ ರಾಜ್ಯ ಮಟ್ಟದಲ್ಲಿ ಬೃಹತ್ ಹೋರಾಟವನ್ನು ಮಾಡಬೇಕಾಗಿ ಒತ್ತಾಯ ಮಾಡುತ್ತಿರುವುದರಿಂದ ಜೊತೆಗೆ ಸಂಘಟನೆ ನೌಕರರ ಹಿತ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಮಟ್ಟದ ಹೋರಾಟ ಮಾಡುವುದೆಂದು 24-09-2022 ರಂದು ನಡೆದ ಪಂಚಾಯಿತಿ ನೌಕರರ ಸಮಾಲೋಚನೆ ಸಭೆಯಲ್ಲಿ ತಿರ್ಮಾನಿಸಲಾಗಿತ್ತು.

ಮುಖ್ಯ ಮಂತ್ರಿಗಳು ಪ್ರಸ್ತುತ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ಹೊಂದಿದ್ದು, ಇಲಾಖೆಯ ಅಭಿವೃದ್ಧಿಗೆ ಕಳೆದ ಮೂರು ದಶಕಗಳಿಂದ ಹಗಲಿರುಳು ದುಡಿಯುತ್ತಿರುವ ಗ್ರಾಮ ಪಂಚಾಯಿತಿ ನೌಕರರಾದ ಬಿಲ್ ಕಲೇಕ್ಟರ್‌, ಕ್ಲರ್ಕ್‌ ಕಮ್‌ ಡಿಇಒ, ಡಾಟ ಎಂಟ್ರೀ ಅಪರೇಟರ್‌, ವಾಟರ್‌ ಮ್ಯಾನ್‌, ಪಂಪುಚಾಲಕ, ಶುಚಿತ್ವ ನೌಕರರು ಹಾಗೂ ಅಟೆಂಡರ್‌ ಗಳು ಭವಿಷ್ಯ ನಿಧಿ, ಆರೋಗ್ಯ ಭದ್ರತೆ, ಸರಿಯಾದ ವೇತನ ಶ್ರೇಣಿ, ಉದ್ಯೋಗ ಭದ್ರತೆ, ನಿವೃತ್ತಿ ಜೀವನಕ್ಕೆ ಭದ್ರತೆ ಇಲ್ಲದೇ ಕಳೆದ ಮೂರು ದಶಕಗಳಿಂದ ಕೇವಲ ಕನಿಷ್ಠ ಕೂಲಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದೇವೆ.

ಹೀಗಾಗಿ ಸರ್ಕಾರ ‌ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಇಂದಿನಿಂದ ಅಧಿವೇಶದ ವೇಳೆ ಬೃಹತ್‌ ಹೋರಾಟ ಮಾಡುತ್ತಿದ್ದೇವೆ ಎಂದು ಸಮಿತಿ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಧರ್ಮಸ್ಥಳ ಹೋರಾಟದ ಬಗ್ಗೆ ವಿವರಿಸಿದ್ದಾರೆ.

ಪ್ರಪ್ರಥಮ ಬಾರಿಗೆ ಪಂಚಾಯಿತಿ ನೌಕರರೇ ಸೇರಿ 19-12-2022 ರಿಂದ ಬೆಳಗಾವಿ ಸುವರ್ಣ ಸೌಧದ ಎದುರು ಗ್ರಾಮೀಣ ಭಾಗದಲ್ಲಿನ ಎಲ್ಲ ಕಾರ್ಯಗಳನ್ನು ನಿಲ್ಲಿಸಿ, ಅನಿರ್ದಿಷ್ಟ ಕಾಲ ತಮ್ಮ ಮೂಲಭೂತ ಬೇಡಿಕೆಗಳಿಗಾಗಿ ರಾಜ್ಯ ಮಟ್ಟದ ಬೃಹತ್ ಹೋರಾಟಕ್ಕೆ ಇಳಿದಿದ್ದೇವೆ ಎಂದು ತಿಳಿಸಿದ್ದಾರೆ.

ನಮ್ಮ ಮುಖ್ಯ ಬೇಡಿಕೆಗಳು: 1. ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲರ್ಕ್/ ಕ್ಲಕ್ ಕಮ್ ಡಿಇಒ, ಬಿಲ್‌ ಕಲೇಕ್ಟರ್ ಹಾಗೂ ಡಾಟ ಎಂಟ್ರೀ ಅಪರೇಟರ್ ಗಳಿಗೆ ಸಿ ದರ್ಜೆ ಸ್ಥಾನಮಾನ ಮತ್ತು ಅಟೆಂಡರ್, ಕ್ಲೀನರ್ಸ್‌, ವಾಟರ್ ಮ್ಯಾನ್/ಪಂಪು ಚಾಲಕ ಇತ್ಯಾದಿ ವೃಂದದವರಿಗೆ ಡಿ ದರ್ಜೆ ನೀಡಿ, ನಗರ ಮತ್ತು ಪಟ್ಟಣ ಪಂಚಾಯಿತಿಯಂತೆ ವೇತನ ಶ್ರೇಣಿ ನಿಗದಿಪಡಿಸಬೇಕು, ಜೊತೆಗೆ ನೌಕರರು ಮತ್ತು ನೌಕರರ ಅವಲಂಬಿತರಿಗೆ ಆರೋಗ್ಯ ಭದ್ರತೆಯೊಂದಿಗೆ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಬೇಕು.

2. ಪಂಚಾಯಿತಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವಾಟರ್‌ ಮ್ಯಾನ್‌, ಶುಚಿತ್ವ ನೌಕರರು ಹಾಗೂ ಇತರ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸಿದೇ ಹಾಗೂ ಪಂಚಾಯತಿಗಳಲ್ಲಿ ಹುದ್ದೆಗಳ ಗರಿಷ್ಠ ಮೀತಿಯನ್ನು ಮತ್ತು ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿದೆ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ನೀಡಬೇಕು. ಮತ್ತು ಪಂಚಾಯಿತಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಡಾಟ ಎಂಟ್ರೀ ಅಪರೇಟರ್‌ ಗಳಿಗೆ ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿ ಸೇವಾ ಭದ್ರತೆ ಒದಗಿಸಬೇಕು.

3. ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಇತರೆ ಸಮಸ್ಯೆಗಳಿಂದ ಜಿಲ್ಲಾ ಪಂಚಾಯಿತಿ ಅನುಮೋದನೆಯಾಗದೇ ನಿವೃತ್ತಿಯಾದ ಹಾಗೂ ಮುಂದೆ ನಿವೃತ್ತಿಯಾಗುವ ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ನಿವೃತ್ತಿ ಉಪಧನ ಮಂಜೂರು ಮಾಡಬೇಕು, ಈ ನಿವೃತ್ತಿ ಉಪಧನ ಪಾವತಿಸಲು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಸರ್ಕಾರವೇ ಒಂದು ಶಾಶ್ವತ ನಿಧಿಯನ್ನು ಕಾಯ್ದಿರಿಸಿ ಪಂಚಾಯಿತಿ ನೌಕರರ ನಿವೃತ್ತಿ ಆದ ಒಂದು ತಿಂಗಳ ಒಳಗಾಗಿ ಗೌರವ ನಿವೃತ್ತಿ ಉಪಧನ ಮಂಜೂರು ಮಾಡಬೇಕು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು