NEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿ: ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ – ಸಹಸ್ರಾರು ನೌಕರರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಇಂದಿನಿಂದ ಡಿಸೆಂಬರ್‌ 30ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ವಿಶೇಷ ಅಧಿವೇಶದಲ್ಲಿ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ನಾಲ್ಕೂ ನಿಗಮಗಳ ಸಮಸ್ತ ನೌಕರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸುವರ್ಣಸೌಧದ ಮುಂಭಾಗದ ವಿಶಾಲವಾದ ಪೆಂಡಲ್‌ ಕೆಳಗೆ ಈಗಾಗಲೇ ಸಹಸ್ರಾರು ನೌಕರರು  ಜಮಾವಣೆಗೊಂಡಿದ್ದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ವೇಳೆ ಸತ್ಯಾಗ್ರಹ ನಿರತ ನೌಕರರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 2 ವರ್ಷದಿಂದ ನಿರಂತವಾಗಿ ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳಿಗೂ ನೂರಾರು ಮನವಿ ಪತ್ರ ಸಲ್ಲಿಸಿದ್ದರೂ ಬೇಡಿಕೆ ಈಡೇರಿಸುವಲ್ಲಿ ಇನ್ನೂ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೆ ಸರ್ಕಾರ ಮತ್ತು ಆಡಳಿತ ಮಂಡಳಿಗೆ ನೆನಪಿಸುವ ಸಲುವಾಗಿ ನಾವು ಕಳೆದ ಅ.10ರಿಂದ ನ.25ರವರೆಗೂ ರಾಜ್ಯದ 18 ಜಿಲ್ಲೆಗಳಲ್ಲಿ ಬೃಹತ್‌ ಸೈಕಲ್‌ ಜಾಥಾ ಮಾಡಿದ್ದೇವೆ. ಆದರೂ ಇದಾವುದಕ್ಕೂ ಗಮನಹರಿಸಿಲ್ಲ. ಹೀಗಾಗಿ ಮತ್ತೆ ನಾವು ಹೋರಾಟ ಮಾಡುವ ಅನಿವಾರ್ಯತೆಯನ್ನು ಸರ್ಕಾರವೇ ಸೃಷ್ಟಿಸಿದೆ. ಹೀಗಾಗಿ ನಾವು ಅಧಿವೇಶದ ವೇಳೆ ಸತ್ಯಾಗ್ರಹ ನಡೆಸುತ್ತಿದ್ದೇವೆ ತಿಳಿಸಿದರು.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ, ನಮ್ಮ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದ ಸತ್ಯಾಗ್ರಹ ನಿರತರು, ಮುಖ್ಯ ಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಮತ್ತು ವಿಪಕ್ಷ ನಾಯಕರಿಗೂ ಹಲವಾರು ಮನವಿ ಸಲ್ಲಿಸಿದರು ನಮ್ಮ ಸಮಸ್ಯೆ ಬಗ್ಗೆ ಇನ್ನು ತಿರುಗಿಯೂ ನೋಡಿಲ್ಲ ಈಗಲಾದರೂ ಸದನಲ್ಲಿ ಧ್ವನಿ ಎತ್ತಿ ಎಂದು ವಿಪಕ್ಷ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಇನ್ನು ಸಿಎಂ ಮತ್ತು ಸಾರಿಗೆ ಸಚಿವರು ವಿಪಕ್ಷದ ನಾಯಕರು ಧ್ವನಿ ಎತ್ತುವ ಮುನ್ನವೇ ನಮ್ಮ ವೇತನದ ಬಗ್ಗೆ ಮತ್ತು ಸಮಸ್ಯೆ ನಿವಾರಣೆ ಮಾಡಲು ಕ್ರಮ ಜರುಗಿಸಿರುವ ಬಗ್ಗೆ ನೀವೇ ಸದನದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಸರ್ಕಾರದ ವಿಳಂಬನೀತಿಯಿಂದ ಸಾರಿಗೆ ಬಸ್‌ ಘಟಕಗಳಲ್ಲಿ ಪ್ರತಿ ಹಂತದಲ್ಲೂ ವ್ಯಾಪಕ ಭ್ರಷ್ಟಚಾರ ನಡೆಯುತ್ತಿದ್ದು ಫೋನ್ ಪೇ, ಗೂಗಲ್ ಪ್ಲೇ ಹಾಗೂ ಏಜೆಂಟ್ ಸಂಸ್ಕೃತಿ ಹೆಮ್ಮರವಾಗಿ ಬೆಳೆದು ನಿಂತಿದೆ. ಅಲ್ಲದೆ ನೌಕರರು ದಿನಂಪ್ರತಿ ನಾನಾ ರೀತಿಯ ಮಾನಸಿಕ ಕಿರುಕುಳಗಳನ್ನು ಅನುಭವಿಸುತ್ತ ಕರ್ತವ್ಯ ನಿರ್ವಹಿಸಬೇಕಾದ ವಾತಾವರಣ ಉದ್ಭವವಾಗಿದೆ. ನೊಂದ ಕೆಲವರು ಕಿರುಕುಳ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆದರೂ ಈವರೆಗೂ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ತಾವು ಈಗಲಾದರೂ ನಮ್ಮ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸತ್ಯಾಗ್ರಹ ನಿರತ ಸಾರಿಗೆ ನೌಕರರು ಒತ್ತಾಯಿಸಿದ್ದಾರೆ.

ಪ್ರಮುಖವಾದ ಬೇಡಿಕೆಗಳು: 1) ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೇ ಈ ಕೂಡಲೇ ಮರು ನೇಮಕ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ, ಇತರ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆದು ದಿನಾಂಕ; 06/04/2021ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡುವುದು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿ ಕೈಬಿಟ್ಟು, ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಂಡು ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವುದು.

3) 1992 ರ ನಂತರ, ಇಲ್ಲಿಯವರೆಗೂ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆಗಳು ನಡೆದಿಲ್ಲ. ಆದ್ದರಿಂದ ಈ ಕೂಡಲೆ ಕಡ್ಡಾಯವಾಗಿ ಸಾರಿಗೆ ನಿಗಮಗಳಲ್ಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆಸುವುದು.

4) ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಇತರ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುದ ಯೋಜನೆಯನ್ನು ಈ ಕೂಡಲೆ ಕೈ ಬಿಡುವುದು.

5) ಸಾರಿಗೆ ಸಂಸ್ಥೆಯ ಎಲ್ಲ ನೌಕರರಿಗೂ ದಿನಾಂಕ: 10/04/2002 ರ ಪೂರ್ವದಲ್ಲಿ ಉಪದಾನ ಪಾವತಿಸುತ್ತಿದ್ದ ನಿಯಮಾವಳಿಯನ್ನು ಪರಿಗಣಿಸಿ ಜಾರಿಗೊಳಿಸುವುದು, 6) ಕಾರ್ಯಸ್ಥಳಗಳಲ್ಲಿ ನೌಕರರು ಕಿರುಕುಳ ರಹಿತ ಮತ್ತು ನೆಮ್ಮದಿಯಾಗಿ ಕರ್ತವ್ಯ ನಿರ್ವಾಹಿಸುವ ವಾತಾವರಣ ಸೃಷ್ಟಿ ಮಾಡಬೇಕು ಎಂಬ ಒತ್ತಾಯಗಳನ್ನು ಮಾಡುತ್ತಾ ಧರಣಿ ಹಮ್ಮಿಕೊಳ್ಳುವುದಕ್ಕೆ ಸಮಾನ ಮನಸ್ಕರ ವೇದಿಕೆ ಸಜ್ಜಾಗಿದೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ