NEWSನಮ್ಮಜಿಲ್ಲೆನಮ್ಮರಾಜ್ಯ

ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌ಗೆ 15 ಕೋಟಿ ರೂ.: ತನಿಖೆ ಕೋರಿ ಚುನಾವಣಾ ಆಯೋಗ, ಇಡಿಗೆ ಎಎಪಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎಚ್‌.ವಿಶ್ವನಾಥ್‌ರವರಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಒಪ್ಪಿಕೊಂಡಿರುವ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿಯು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್‌ರವರಿಗೆ 15 ಕೋಟಿ ರೂಪಾಯಿ ಹಣ ನೀಡಿರುವುದು ಹಾಗೂ ಅದರಲ್ಲಿ ವಿಶ್ವನಾಥ್‌ರವರು 4ರಿಂದ 5 ಕೋಟಿ ರೂಪಾಯಿಯನ್ನು ಖರ್ಚು ಮಾಡಿರುವ ಗಂಭೀರ ವಿಚಾರವನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಬಹಿರಂಗ ಪಡಿಸಿದ್ದಾರೆ.

ವಿ.ಶ್ರೀನಿವಾಸ್‌ ಪ್ರಸಾದ್‌ ಅವರು ಕೂಡ ಚುನಾವಣೆಗೆ ಹಣ ಪಡೆದಿದ್ದಾರೆ ಎಂದು ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಈ 15 ಕೋಟಿ ರೂಪಾಯಿಯನ್ನು ಬಿಜೆಪಿ ಹೇಗೆ ಸಂಪಾದಿಸಿತು? ಅಭ್ಯರ್ಥಿ ಎಚ್.ವಿಶ್ವನಾಥ್‌ ಅವರಿಗೆ ಯಾಕಾಗಿ ವರ್ಗಾಯಿಸಲಾಯಿತು? ವಿಶ್ವನಾಥ್‌ ಅವರು 4 ಅಥವಾ 5 ಕೋಟಿ ರೂಪಾಯಿಯನ್ನು ಹೇಗೆ ಖರ್ಚು ಮಾಡಿದರು? ಉಳಿದ 10 ಕೋಟಿ ರೂಪಾಯಿ ಈಗ ಎಲ್ಲಿದೆ? ಚುನಾವಣಾ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದೊಂದು ಬಹುದೊಡ್ಡ ಚುನಾವಣಾ ಅಕ್ರಮ. 2019ರಲ್ಲಿದ್ದ ಚುನಾವಣಾ ಆಯೋಗದ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿಯು 28 ಲಕ್ಷ ರೂಪಾಯಿಯನ್ನು ಮಾತ್ರ ಖರ್ಚು ಮಾಡಲು ಅವಕಾಶ ಇರುತ್ತದೆ. ಬಿಜೆಪಿ ಸಂಸದರೇ ಬಹಿರಂಗವಾಗಿ ಒಪ್ಪಿಕೊಂಡಿರುವಂತೆ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್‌ರವರು 4ರಿಂದ 5 ಕೋಟಿ ರೂಪಾಯಿ ಖರ್ಚು ಮಾಡಿರುವುದು ಗರಿಷ್ಠ ಮಿತಿಗಿಂತ ಬರೋಬ್ಬರಿ 15 ಪಟ್ಟಿಗೂ ಹೆಚ್ಚು ಖರ್ಚು ಮಾಡಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್‌ ವಿ ಸದಂ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜಕೀಯ ಚಟುವಟಿಕೆ ವಿಭಾಗದ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, “ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ. ಎಚ್‌.ವಿಶ್ವನಾಥ್‌ ಹಾಗೂ ವಿ.ಶ್ರೀನಿವಾಸ್‌ ಪ್ರಸಾದ್‌ ಇವರಿಬ್ಬರನ್ನೂ ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು.

ಬಿಜೆಪಿಯೇತರ ಪಕ್ಷಗಳ ನಾಯಕರ ವಿರುದ್ಧ ನಿರಾಧಾರ ಆರೋಪ ಕೇಳಿಬಂದರೂ ಜಾರಿ ನಿರ್ದೇಶನಾಲಯ ಶೀಘ್ರವೇ ದಾಳಿ ಮಾಡುತ್ತದೆ. ನಾಯಕರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸುತ್ತದೆ. ಆದರೆ ಬಿಜೆಪಿ ಅಭ್ಯರ್ಥಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಸ್ವತಃ ಬಿಜೆಪಿ ಸಂಸದರೇ ಬಹಿರಂಗ ಪಡಿಸಿ ನಾಲ್ಕು ದಿನಗಳಾದರೂ ಇನ್ನೂ ಯಾವುದೇ ದಾಳಿ ಮಾಡದಿರಲು ಕಾರಣವೇನು ಎಂದು ಪ್ರಶ್ನಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ