NEWSಆರೋಗ್ಯನಮ್ಮಜಿಲ್ಲೆ

ವಾಣಿ ವಿಲಾಸ, ನಿಮ್ಹಾನ್ಸ್‌ ಆಸ್ಪತ್ರೆಗಳಿಗೆ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಾಣಿ ವಿಲಾಸ ಮತ್ತು ನಿಮ್ಹಾನ್ಸ್‌ ಆಸ್ಪತ್ರೆಗಳಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯಕಾರಿ ಅಧ್ಯಕ್ಷರು ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ ರೋಗಿಗಳ ಮತ್ತು ಅವರ ಕುಟುಂಬದವರ ಅಹವಾಲು ಸ್ವೀಕರಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ವೇಳೆ ಕಾನೂನು ಸೇವಾ ಪ್ರಾಧಿಕಾರ ಕಾಯಿದೆ ಸೆಕ್ಷನ್‌ 22(ಎ)(ಬಿ)(ವಿ) ಅಡಿ ಜನರಿಗೆ ದಾವೆ ಪೂರ್ವ ರಾಜಿ ಮತ್ತು ಇತ್ಯರ್ಥದ ಕುರಿತು ಅರಿವು ಮೂಡಿಸಿದರು.

ವಾಣಿ ವಿಲಾಸ ಆಸ್ಪತ್ರೆಯ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು. ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಳ ಮಾಡಿರುವುದರಿಂದ ಸಿಬ್ಬಂದಿಯನ್ನೂ ಹೆಚ್ಚಿಸಬೇಕಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇನ್ನು ತಾಯಿ ಎದೆ ಹಾಲು ಸಂಗ್ರಹಿಸಿ, ಅಗತ್ಯವಾದ ಹಸುಗೂಸುಗಳಿಗೆ ಅದನ್ನು ಪೂರೈಸುವುದಕ್ಕಾಗಿ ರೂಪಿಸಲಾಗಿರುವ ಸಮಗ್ರ ಸ್ತನ್ಯಪಾನ ನಿರ್ವಹಣಾ ಕೇಂದ್ರ ʼಅಮೃತಧಾರೆʼ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಾಣಿ ವಿಲಾಸ ಆಸ್ಪತ್ರೆಯ ವೈದ್ಯಕೀಯ ಮೇಲ್ವಿಚಾರಕಿ ಡಾ. ಸವಿತಾ ಅವರು ನ್ಯಾ. ವೀರಪ್ಪ ಮತ್ತು ಅವರ ತಂಡಕ್ಕೆ ಆಸ್ಪತ್ರೆಯಲ್ಲಿ ನಾಗರಿಕರಿಗೆ ಕಲ್ಪಿಸಿರುವ ಸೌಲಭ್ಯದ ಕುರಿತು ವಿವರಣೆ ನೀಡಿದರು.

ಇನ್ನು ನಿಮ್ಹಾನ್ಸ್‌ನಲ್ಲಿ ಹೊರರೋಗಿಗಳಿಗೆ ನೀಡಲಾಗುವ ಟೋಕನ್‌ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಬೇಕಿದೆ. ಎಲ್ಲ ರೋಗಿಗಳನ್ನು ಸಮಾನವಾಗಿ ಕಾಣಬೇಕು. ರಾಜ್ಯದಲ್ಲಿ ಮನೋವಿಜ್ಞಾನಿಗಳು ಮತ್ತು ನರವಿಜ್ಞಾನ ತಜ್ಞರ ಕೊರತೆಯಿಂದಾಗಿ ಜನರು ನಿಮ್ಹಾನ್ಸ್‌ ಅನ್ನು ಅತೀವವಾಗಿ ಅವಲಂಬಿಸಿದ್ದಾರೆ ಎಂದರು.

ಪಾರ್ಶ್ವವಾಯು ಹಾಗೂ ಮಾನಸಿಕ ರೋಗಗಳಿಗೆ ತುರ್ತು ಚಿಕಿತ್ಸೆ ನೀಡಲು ಪ್ರತಿ ಜಿಲ್ಲೆಯಲ್ಲಿ ಉಪ ಕೇಂದ್ರ ಆರಂಭಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ನಿಮ್ಹಾನ್ಸ್‌ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ವಿವರಿಸಿದರು.

ಆಸ್ಪತ್ರೆಗಳ ಭೇಟಿಯ ಸಂದರ್ಭದಲ್ಲಿನ ವರದಿಯನ್ನು ಸರ್ಕಾರದ ಸಂಬಂಧಿತ ಇಲಾಖೆಗಳ ಅವಗಾಹನೆಗೆ ತರುವ ನಿಟ್ಟಿನಲ್ಲಿ ಪತ್ರ ಬರೆಯುವಂತೆ ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿಗೆ ನ್ಯಾ. ವೀರಪ್ಪ ನಿರ್ದೇಶನ ನೀಡಿದರು.

ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಜೈಶಂಕರ್‌, ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್‌, ಸಾರ್ವಜನಿಕ ಸಂಪರ್ಕಾಧಿಕಾರಿ ವಿಗ್ನೇಶ್‌ ಕುಮಾರ್‌ ಇದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ