NEWSನಮ್ಮರಾಜ್ಯ

KSRTC ನಾಲ್ಕೂ ನಿಗಮಗಳ ನೌಕರರ ಪರ ಅರ್ಜಿ ವಿಚಾರಣೆ: ನಾಲ್ವರು ಎಂಡಿಗಳು, ಪ್ರಧಾನ ಕಾರ್ಯದರ್ಶಿ, CAOಗೆ ನೋಟಿಸ್‌ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರಬೇಕಿರುವ ವೇತನ ಪರಿಷ್ಕರಣೆ 14ತಿಂಗಳಗಳು ಕಳೆದರೂ ಆಗದಿರುವ ಸಂಬಂಧ  ನಾಲ್ಕೂ ನಿಗಮಗಳ ಎಂಡಿಗಳು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಇಂದು ರಾಜ್ಯ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರಬೇಕಿರುವ ವೇತನ ಪರಿಷ್ಕರಣೆಯನ್ನು 14ತಿಂಗಳಗಳು ಕಳೆದರೂ ಮಾಡಿದಿರುವ ಬಗ್ಗೆ ಮಾ.10 ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆ ಅರ್ಜಿ ವಿಚಾರಣೆಯನ್ನು ಇಂದು (ಮಾ.11) ಕೈಗೆತ್ತಿಕೊಂಡ ಹೈಕೊರ್ಟ್‌ ನ್ಯಾಯಮೂರ್ತಿ ಶ್ಯಾಮ್‌ಪ್ರಸಾದ್‌ ಅವರಿದ್ದ ಏಕಸದಸ್ಯಪೀಠ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಿ ಮುಂದಿನ ತಿಂಗಳು ಅಂದರೆ ಏಪ್ರಿಲ್‌ 7ಕ್ಕೆ ಮುಂದೂಡಿದೆ.

ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲೇನಿದೆ: ಸರ್ಕಾರಿ ನೌಕರರಿಗೆ ಕೊಡುತ್ತಿರುವ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ಕೊಡಬೇಕು. ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆಯನ್ನು ಇನ್ನೂ ಮಾಡಿಲ್ಲ ಎಂಬುವುದು ಸೇರಿದಂತೆ ನೌಕರರಿಗೆ ಹಲವು ಸೌಲಭ್ಯಗಳನ್ನು ಕೊಟ್ಟಿಲ್ಲ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಇನ್ನು ಸಾರಿಗೆ ನೌಕರರ ಬಹು ವರ್ಷದ ಸರಿ ಸಮಾನ ಸೌಲಭ್ಯದ ಕನಸ್ಸು ಈ ಮೂಲಕ ಈಡೇರುವ ನಿರೀಕ್ಷೆಯಲ್ಲಿದ್ದಾರೆ ನೌಕರರು.

ಸಾರಿಗೆ ನೌಕರರ ಮಲತಾಯಿಯಂತೆ ಕಾಣುತ್ತಿರುವ ಸರ್ಕಾರ: ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ಮಲತಾಯಿಯಂತೆ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಜತೆಗೆ ಕೆಲ ಸಂಘಟನೆಗಳ ಮುಖಂಡರು ವೈಯಕ್ತಿಕ ದ್ವೇಷದಿಂದ ಸರ್ಕಾರಕ್ಕೆ ಎಚ್ಚರಿಕೆ ಕೊಡದೆ ಮೀನಮೇಷ ಎಣಿಸುತ್ತಿದ್ದಾರೆ.

ಒಟ್ಟಾರೆ ಸರ್ಕಾರ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಜಾರಿ ಮಾಡಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ನೌಕರರಿಗೆ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮತ್ತೆ ವೇತನ ಪರಿಷ್ಕರಣೆ ಆಗಬೇಕಿತ್ತು, ಅದನ್ನು ಕೂಡ ಮಾಡಿಲ್ಲ.

ಈ ಎಲ್ಲವನ್ನು ಸಾರಿಗೆ ನೌಕರರಿಗೆ ಕೊಡುವುದಕ್ಕೆ ಸರ್ಕಾರ ಈವರೆಗೂ ಮುಂದೆ ಬಂದಿಲ್ಲ. ಹೀಗಾಗಿ ನೌಕರರು ತಮ್ಮ ವೇತನ ಸೌಲಭ್ಯಪಡೆಯಲೂ ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲವನ್ನು ಗಮನಿಸಿರುವ ಶಿವರಾಜು ಅವರು ನೌಕರರಿಗೆ ಸರಿ ಸಮಾನ ಸೌಲಭ್ಯ  ಕೊಡಿಸಲು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Deva
the authorDeva

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?