NEWSದೇಶ-ವಿದೇಶರಾಜಕೀಯ

ಮುಂಬೈಯಲ್ಲಿ ಮರಾಠಿ ಭಾಷಿಕರು ಎಷ್ಟಿದ್ದಾರೆ ಎಂದು ಪ್ರಶ್ನಿಸಿದರೆ ಅವರಿಗೇ ಸಮಸ್ಯೆ: ಸಚಿವ ಅಶ್ವತ್ಥನಾರಾಯಣ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಮುಂಬೈಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಆಕ್ರೋಶ ಹೊರಹಾಕಿದರು.

ಜನರ ಬಗ್ಗೆ ಕಾಳಜಿಯಿಲ್ಲದ‌ ಉದ್ಧವ್ ಠಾಕ್ರೆ ರಾಜಕೀಯ ಹಾಗೂ‌ ಸ್ವಾರ್ಥಕ್ಕಾಗಿ‌ ಹೀಗೆ ಮಾಡುತ್ತಿದ್ದಾರೆ. ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ‌ ಹಾಗೂ ಭಾರ. ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಆಲೋಚನೆ ಅವರಿಗೆ ಹೇಗೆ ಬಂತು ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.

ಶೇ.3ರಷ್ಟು ಮೀಸಲಾತಿ ಬೇಡ. ನಾವು ಭಿಕ್ಷುಕರಲ್ಲ: ಯಾವ್ಯಾವ ಸಮುದಾಯಕ್ಕೆ ಎಷ್ಟೆಷ್ಟು‌ ಮೀಸಲಾತಿ ನೀಡಬೇಕು ಎನ್ನುವ ಕುರಿತು ಹಿಂದುಳಿದ ವರ್ಗದ ಆಯೋಗಕ್ಕೆ ಶಿಫಾರಸು‌ ಕಳುಹಿಸಲಾಗಿದೆ. ಆಯೋಗದ ವರದಿ ಆಧರಿಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಒಕ್ಕಲಿಗರಿಗೆ ಶೇ.3ರಷ್ಟು ಮೀಸಲಾತಿ ಬೇಡ. ನಾವು ಭಿಕ್ಷುಕರಲ್ಲ ಎಂದು ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ಒಮ್ಮೆಲೆ‌ ಜಾಗೃತರಾಗಿದ್ದಾರೆ. ಅವರ ಸರ್ಕಾರ ಇದ್ದಾಗ ಈ ಮೀಸಲಾತಿ ಭಿಕ್ಷೆ ಅನಿಸಿರಲಿಲ್ಲವೇ ಎಂದು ಅವರನ್ನು ಅವರೇ‌ ಪ್ರಶ್ನಿಸಿಕೊಳ್ಳಲಿ ಅಂತ ಹೇಳಿದರು.

ಕೋವಿಡ್ ನೆಪದಲ್ಲಿ ಅವಧಿಪೂರ್ವ‌ ಚುನಾವಣೆ ನಡೆಸಲು‌ ಬಿಜೆಪಿ ಮುಂದಾಗಿದೆ’ ಎನ್ನುವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಶಿವಕುಮಾರ‌ ಅವರಿಗೆ ತಿಳಿವಳಿಕೆ‌ ಕೊರತೆ. ಹಲವಾರು ಜವಾಬ್ದಾರಿ ನಿರ್ವಹಿಸಿರುವ ಅವರು, ವಿಶ್ವದಾದ್ಯಂತ ಏನಾಗುತ್ತಿದೆ ಎನ್ನುವುದು ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಇನ್ನು ಅವರಿಗೆ ರಾಜಕೀಯ ಮತ್ತು ಚುನಾವಣೆ ಬಿಟ್ಟರೆ, ಜನರ ಸಮಸ್ಯೆ ಹಾಗೂ ಆರೋಗ್ಯದ ಚಿಂತನೆಯಿಲ್ಲ. ಅಧಿಕಾರ ಕಳೆದುಕೊಂಡ ಅವರಿಗೆ ಬಹಳ ಸಂಕಟವಾಗುತ್ತಿದೆ. ಇದೀಗ ಅದರ ಹಪಾಹಪಿ, ಹಸಿವು ಹೆಚ್ಚಿರುವುದರಿಂದ‌ ಹೀಗೆಲ್ಲ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...