CRIMEನಮ್ಮಜಿಲ್ಲೆ

KKRTC: ಬೈಕ್‌ಗಳಿಗೆ ಡಿಕ್ಕಿ ಹೊದೆಡ ಬಸ್‌- ಐವರು ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಪಟ್ಟಿರುವ ಘಟನೆ ಇಂದು ಆಂಧ್ರಪ್ರದೇಶದ ಪೆದ್ದ ತುಂಬಲಂ ಬಳಿ ನಡೆದಿದೆ.

ಕೆಕೆಆರ್‌ಟಿಸಿ ಗಂಗಾವತಿ ಘಟಕದ ಗಂಗಾವತಿ – ಮಂತ್ರಾಲಯ  ಮಾರ್ಗಾಚೆಣೆ ಮಾಡುತ್ತಿದ್ದ  ಬಸ್‌ ಆಂಧ್ರಪ್ರದೇಶದ ಪೆದ್ದ ತುಂಬಲಂ ಬಳಿ ಎದುರಿಗೆ ಬರುತ್ತಿದ್ದ ಬೈಕ್‌ಗಳಿಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 5 ಬೈಕ್‌ ಸವಾರರು ಮೃತಪಟ್ಟಿದ್ದಾರೆ.

ಮಾನ್ವಿ ಮೂಲದ ಹೇಮಾದ್ರಿ (55), ಪತ್ನಿ ನಾಗರತ್ನಮ್ಮ (44), ಪುತ್ರ ದೇವರಾಜು(24), ಆದೋನಿ ತಾಲೂಕಿನ ಕುಪ್ಪಗಲ್ಲು ಗ್ರಾಮದ ಪತಿ ಈರಣ್ಣ (40), ಪತ್ನಿ ಆದಿಲಕ್ಷ್ಮಿ (30) ಮೃತರು.

ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಬಸ್ ಗಂಗಾವತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿತ್ತು. ಅದೇ ಮಾರ್ಗದಲ್ಲಿ ಮಾನ್ವಿ ಮೂಲದ ಹೇಮಾದ್ರಿ ಕುಟುಂಬ ತೆರಳುತ್ತಿತ್ತು. ಮತ್ತೊಂದು ಬೈಕ್‌ನಲ್ಲಿ ಕುಪ್ಪಗಲ್ಲು ಗ್ರಾಮದ ಕಡೆಗೆ ಈರಣ್ಣ ಕುಟುಂಬ ಹೋಗುತ್ತಿತ್ತು. ಈ ವೇಳೆ ಸಾರಿಗೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ 5 ಮಂದಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇನ್ನೂ, ಕೆಕೆಆರ್​ಟಿಸಿ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆದೋನಿ ಪೊಲೀಸರು ಹಾಗೂ ಕೆಕೆಆರ್‌ಟಿಸಿ ರಾಯಚೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಚಂದ್ರಶೇಖರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆದೋನಿ ಸರ್ಕಾರಿ ಆಸ್ಪತ್ರೆಗೆ ರವಾಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...