CRIMENEWS

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಕಾರು ನಡುವೆ ಭೀಕರ ಅಪಘಾತ- ಇಬ್ಬರು ಸಜೀವದಹನ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಹೊತ್ತಿ ಉರಿದಿದ್ದು, ಈ ವೇಳೆ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಸಜೀವ ದಹನವಾಗಿದ್ದು ಮೂವರು ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್‌ ಬಳಿ ಈ ಅವಘಡ ನಡೆದಿದ್ದು, ಅಪಘಾತದಲ್ಲಿ ಆಂಧ್ರಪದೇಶದ ಮದನಪಲ್ಲಿಯ ನಿವಾಸಿಗಳು ಸಜೀವ ದಹನವಾಗಿರುವವರು  ಅವರಲ್ಲಿ ಒಬ್ಬ ಮಹಿಳೆ ಹಾಗೂ ಪುರುಷ ಸಜೀವ ದಹನವಾಗಿದ್ದಾರೆ. ಗುರುತು ಪತ್ತೆಯಾಗಿಲ್ಲ.

ಇನ್ನು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಬಚಾವಾಗಿದ್ದಾರೆ.

ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟರಲ್ಲೇ ಇಬ್ಬರು ಸಜೀವ ದಹನವಾಗಿದ್ದರು. ಈ ಘಟಬೆ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ