CrimeNEWSನಮ್ಮಜಿಲ್ಲೆ

ಮೈಸೂರು: ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟ – 10 ಮಂದಿ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ನಗರದ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಬವಿಸಿದೆ.

ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿ ಭಾರಿ ಹಾಲಿಯಾಗಿದೆ.

ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಮಕ್ಕಳಿದ್ದು, ಓರ್ವ 6 ವರ್ಷ ಹಾಗೂ ಇನ್ನೋರ್ವ 10 ವರ್ಷದ ಬಾಲಕನಾಗಿದ್ದಾನೆ. 6 ಮಂದಿ ಗಾಯಳು ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ದೇಹದ ಕೆಲ ಭಾಗ ಸುಟ್ಟುಹೋಗಿದೆ.  [wp-rss-aggregator limit=”1″]

ಗಾಯಗೊಂಡವರನ್ನು ಸಮೀಪದ ಸೇಂಟ್‌ ಜೋಸೆಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರೆಲ್ಲರೂ ವೆಂಟಿಲೆಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಘಟನೆ ಬಗ್ಗೆ ಆಸ್ಪತ್ರೆ ಬಳಿ ನೆರೆದಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಎನ್‌.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ