NEWSನಮ್ಮಜಿಲ್ಲೆನಮ್ಮರಾಜ್ಯ

ಗುಡ್‌ ನ್ಯೂಸ್‌: ಚಿಕ್ಕಬಳ್ಳಾಪುರಕ್ಕೂ ಹೋಗಿ ಬರಲಿವೆ ಬಿಎಂಟಿಸಿ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2023ರ ಹೊಸ ವರ್ಷದ ಆರಂಭದಲ್ಲಿ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು ಇನ್ನು ಮುಂದೆ ಬಿಎಂಟಿಸಿ ಬಸ್‌ಗಳು ಚಿಕ್ಕಬಳ್ಳಾಪುರದ ವರೆಗೂ ಸಂಚರಿಸಲಿವೆ.

ಈ ಮೂಲಕ ಬಿಎಂಟಿಸಿ ತನ್ನ ವ್ಯಾಪ್ತಿ ವಿಸ್ತರಿಸಲು ಸರ್ಕಾರ ಈಗಾಗಲೇ ಒಪ್ಪಿಗೆ ಗ್ರೀನ್‌ ಸಿಗ್ನಲ್‌ ಕೂಡ ಕೊಟ್ಟಿದೆ. ಹೀಗಾಗಿ ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಈ ಬಸ್‍ಗಳು ಸಂಚಾರ ಮಾಡಲಿವೆ.

ಈವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಯಲ್ಲಷ್ಟೇ ಇವುಗಳ ಸೇವೆ ಲಭ್ಯವಿತ್ತು. ಆದರೆ ಈಗ ಅದು ಚಿಕ್ಕಬಳ್ಳಾಪುರಕ್ಕೂ ವಿಸ್ತರಣೆಯಾಗಿದ್ದು, ಪ್ರಯಾಣಿಕರಿಗೆ ಸಂತಸ ತರಲಿದೆ ಎಂದು ಅಧಿಕಾರಿಗಳು ಭಾವಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌ ಸೇವೆ ಆರಂಭಿಸಬೇಕು ಎಂದು ಈ ಹಿಂದೆಯೇ ಬಿಎಂಟಿಸಿ ಆಡಳಿತ ಮಂಡಳಿ ಹಲವಾರು ಸಭೆಗಳಲ್ಲಿ ಪ್ರಸ್ತಾಪಿಸಿತ್ತು. ಮತ್ತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌ ಓಡಿಸುವುದಕ್ಕೆ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದಾರೆ.

ಈ ಮೂಲಕ ಚಿಕ್ಕಬಳ್ಳಾಪುರ ಜನತೆಯ ಬಹುದಿನದ ಬೇಡಿಕೆಗೆ ಸಂಸ್ಥೆ ಈಗ ಸ್ಪಂದಿಸಿದೆ. ಹೀಗಾಗಿ ಸಾಮಾನ್ಯ ಹಾಗೂ ಐಷಾರಾಮಿ ಬಸ್‌ಗಳು ಬೆಂಗಳೂರು – ಚಿಕ್ಕಬಳ್ಳಾಪುರ ನಡುವೆ ಸಂಚರಿಸಲಿವೆ.

[wp-rss-aggregator limit=”3″]

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ