KSRTC ಬಸ್ ನಿಲ್ಲಿಸಿ ಮುಷ್ಕರ ಮಾಡುದಕ್ಕೆ ನಮ್ಮ ಬೆಂಬಲ ಇಲ್ಲ: ಅಧಿಕಾರಿಗಳು- ಆಡಳಿತ ಸಿಬ್ಬಂದಿ ಸಂಘಟನೆಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ 2024 ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು, 14 ತಿಂಗಳುಗಳು ಕಳೆದರೂ ಕೂಡ ಈವರೆಗೂ ಸರ್ಕಾರ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ. ಜತೆಗೆ 2020ರ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಬೇಕು.
ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಒಕ್ಕೂಟ ಮಾ.25ರ ಬಳಿಕ ಮುಷ್ಕರ ಮಾಡುವುದಾಗಿ ಮೊನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಆದರೆ, ಅಧಿಕಾರಿಗಳ ವರ್ಗ ಬರದಿದ್ದರೆ ನಾವು ಮುಷ್ಕರ ಮಾಡುವುದಕ್ಕೆ ಮುಂದಾಗುವುದಿಲ್ಲ ಎಂದು ಬಹುತೇಕ ನಾಲ್ಕೂ ನಿಗಮಗಳ ಎಲ್ಲ ನೌಕರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೇರಿದಂತೆ ಇತರೆ ಆಡಳಿತ ಸಿಬ್ಬಂದಿ ವರ್ಗದ ಸಂಘಟನೆಗಳ ಪದಾಧಿಕಾರಿಗಳನ್ನು ಈ ಬಗ್ಗೆ ವಿಜಯಪಥ ಸ್ಪಷ್ಟನೆ ಕೇಳಿದಾಗ ಅದಕ್ಕೆ ಅಧಿಕಾರಿಗಳು ಹಾಗೂ ಇತರೆ ಆಡಳಿತ ಸಂಘಟನೆಗಳ ಮುಖಂಡರು ನಾವು ಯಾವುದೇ ಕಾರಣಕ್ಕೂ ಬಸ್ ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವ ಮುಷ್ಕರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ನೀವು ಮುಷ್ಕರಕ್ಕೆ ಬೆಂಬಲ ಕೊಡದಿದ್ದರೆ ಟ್ರೇಡ್ ಯೂನಿಯನ್ಗಳು (ಜಂಟಿಕ್ರೀಯಾ ಸಮಿತಿ. ಸಾರಿಗೆ ನೌಕರರ ಒಕ್ಕೂಟಗಳು) ಕರೆ ಕೊಡುವ ಮುಷ್ಕರದಲ್ಲಿ ನೌಕರರು ಭಾಗಿಯಾದರೆ ಆ ವೇಳೆ ಅವರನ್ನು ವಜಾ, ಅಮಾನತು, ವರ್ಗಾವಣೆ ಹಾಗೂ ಪೊಲೀಸ್ ಕೇಸ್ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದಕ್ಕೆ, ಇದು ನಾವು ಮಾಡುವುದಲ್ಲ ಸರ್ಕಾರದ ನಿರ್ದೇಶನ ಅಥವಾ ಆದೇಶವನ್ನು ನಾವು ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಶಾಂತಿಯುತ ಧರಣಿಗೆ ನಾವು ಬಾಹ್ಯಬೆಂಬಲ ನೀಡತ್ತೇವೆ. ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ನಾವು ಸಪೋರ್ಟ್ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಅಧಿಕಾರಿಗಳು ಹಾಗೂ ಇತರೆ ಸಂಘಟನೆಗಳ ಪದಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಇತ್ತ ಅಧಿಕಾರಿಗಳು ನಿಮ್ಮ ಮುಷ್ಕರವನ್ನು ಬೆಂಬಲಿಸುವುದಕ್ಕೆ ಮುಂದಾಗುತ್ತಿಲ್ಲ ಅಂದಮೇಲೆ ನೀವು ಮುಷ್ಕರ ಮಾಡುವ ವೇಳೆ ಬೆಂಬಲಿಸುವ ನೌಕರರನ್ನು ಅಮಾನತು, ವಜಾ ಮಾಡಿದರೆ ಅದರ ಹೊಣೆಯನ್ನು ನೀವು ಹೊರಲು ಸಿದ್ದರಿದ್ದೀರಾ ಎಂದು ಟ್ರೇಡ್ ಯೂನಿಯನ್ಗಳ ಮುಖಂಡರನ್ನು ಪ್ರಶ್ನಿಸಿದ್ದಕ್ಕೆ ಆ ಮುಖಂಡರು ಮೌನಕ್ಕೆ ಶರಣಾದರು.

ಈ ಎಲ್ಲವನ್ನು ಗಮನಿಸಿದರೆ ಇಲ್ಲಿ ಅಧಿಕಾರಿಗಳು ಬಸ್ ನಿಲ್ಲಿಸಿ ಮುಷ್ಕರ ಮಾಡುವ ನೌಕರರ ವಿರುದ್ಧ ಸರ್ಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳುತ್ತಾರೆ. ಆ ಬಳಿಕ ಮುಂದಿನ ಸಾಲಿನಲ್ಲಿ ಗುರುತಿಸಿಕೊಳ್ಳುವ ನೌಕರರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಅಧಿಕಾರಿಗಳಿಗೆ ವೈಯಕ್ತಿವಾಗಿ ಆಗದ ಕೆಲ ನೌಕರರು ಕೂಡ ಇಲ್ಲಿ ಬಲಿಪಶುಗಳಾಗುತ್ತಾರೆ.
ಹೀಗಾಗಿ ಟ್ರೇಡ್ ಯೂನಿಯನ್ಗಳು ಕರೆ ನೀಡುವ ಮುಷ್ಕರದ ವೇಳೆ ನೌಕರರು ಅಮಾನತು, ವಜಾ, ವರ್ಗಾವಣೆ ಮತ್ತು ಪೊಲೀಸ್ ಕೇಸ್ ಆದರೆ ಅದರ ಹೊಣೆಯನ್ನು ನೌಕರನೇ ಹೊತ್ತುಕೊಳ್ಳಬೇಕು. ಅಂದರೆ ಯಾವುದೇ ಟ್ರೇಡ್ ಯೂನಿಯನ್ಗಳು ನಿಮ್ಮ ಪರ ಕಾನೂನು ಹೋರಾಟ ಮಾಡುವುದಕ್ಕೆ ಸಿದ್ಧರಿರುವುದಿಲ್ಲ.
ಇನ್ನು ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಕೇಸ್ ಆದ ನೌಕರರು ಇದೇ ಯೂನಿಯನ್ಗಳ ಮುಖಂಡರಿಗೆ ಅವರು ನಿಗದಿ ಪಡಿಸಿದಷ್ಟು ಹಣವನ್ನು ಕೊಟ್ಟು ಅವರ ಮೂಲಕ ವಕೀಲರನ್ನು ನೇಮಕ ಮಾಡಿಕೊಂಡು ಕಾನೂನು ಹೋರಾಟ ಮಾಡಬೇಕು. ಇದೆಲ್ಲವನ್ನು ಗಮನಿಸಿದರೆ ಈ ಯೂನಿಯನ್ಗಳು ಕರೆ ಕೊಡುವ ಹೋರಾಟ ಒಂದು ರೀತಿಯಲ್ಲಿ ಅಧಿಕಾರಿಗಳಿಗೆ ಲಾಭ ನೌಕರರಿಗೆ ಸಂಚಕಾರ ಎಂಬಂತೆ ಇದೆ.
ಹೀಗಾಗಿ ಪ್ರತಿಯೊಬ್ಬ ನೌಕರರು ಯೋಚಿಸಿ, ನಾವು ಟ್ರೇಡ್ ಯೂನಿಯನ್ಗಳು ಈ ಮೊದಲೇ ಹೇಳಿದಂತ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಕರೆ ಕೊಡುವ ಮುಷ್ಕರಕ್ಕೆ ನಾವು ಹೋಗಬೇಕಾ ಬೇಡವೆ ಎಂದು. ಕಾರಣ ಇಲ್ಲಿ ಅಧಿಕಾರಿಗಳು ಸರ್ಕಾರದ ನಿರ್ದೇಶನವನ್ನು ಪಾಲನೆ ಮಾಡುತ್ತಿದ್ದೇವೆ ಎಂದು ನಿಮ್ಮ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾರೆ ಇದು ಕಟು ಸತ್ಯ.
ಅದನ್ನು ಎದರಿಸಲು ಅಧಿಕಾರಿಗಳು ಅಥವಾ ಸರ್ಕಾರದ ವಿರುದ್ಧ ಯೂನಿಯನ್ಗಳು ಮತ್ತೆ ಹೋರಾಟ ಮಾಡುವುದಿಲ್ಲ. ಬದಲಿಗೆ ನಾವು ಹೋರಾಟ ಮಾಡಿದ್ದರಿಂದ ನೌಕರರಿಗೆ ಇಷ್ಟು ಪರ್ಸೆಂಟ್ ವೇತನ ಹೆಚ್ಚಾಯಿತು ಎಂದು ಹೇಳಿ ಹೊರಟು ಹೋಗುತ್ತವೆ. ಇದರಿಂದ ಮುಷ್ಕರದ ವೇಳೆ ಆದ ವಜಾ, ಅಮಾನತು, ವರ್ಗಾವಣೆ ಹಾಗೂ ಪೊಲೀಸ್ ಪ್ರಕರಣಗಳನ್ನು ಮೈಮೇಲೆ ಎದುಕೊಳ್ಳುವ ನೌಕರರು ಇತ್ತ ಡ್ಯೂಟಿಯೂ ಇಲ್ಲದೆ ವೇತನವೂ ಇಲ್ಲದೆ ಸಂಸಾರವನ್ನು ಬೀದಿಗೆ ತಂದು ನಿಂತುಕೊಳ್ಳಬೇಕಾ? ಯೋಚಿಸಿ ನಿರ್ಧರಿಸಿ ಇದು ನೌಕರರಿಗೆ ಬಿಟ್ಟ ವಿಚಾರ.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...