Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಕರಾರಸಾಸಂ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಯದೇವ್‌ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಚಾಲಕ ಕಂ ನಿರ್ವಾಹಕ ಜಯದೇವ್‌ ಅವರನ್ನು ನೇಮಕ ಮಾಡಿ ಸಂಘದ ಅಧ್ಯಕ್ಷರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಇಂದು ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಜಯದೇವ ಅವರನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌ ಸ್ವಾಗತಿಸಿದರು.

ಜಯದೇವ ಅವರು ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗ 6 ನೇ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದು ಸದಾ ನೌಕರರ ಸಮಸ್ಯೆಗೆ ಸ್ಪಂದಿಸುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ಸಂಘದ ಸರ್ವ ಸದಸ್ಯರು ಒಮ್ಮತದಿಂದ ನೇಮಕ ಮಾಡಿದ್ದಾರೆ ಎಂದು ಸಂಘದ ಕಾನೂನು ಸಲಹೆಗಾರರಾದ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದರು.

ಇನ್ನು ಸಂಘಕ್ಕೆ ಮತ್ತು ಸದಸ್ಯರಿಗೆ ಯಾವುದೇ ಚ್ಯುತಿ ಬಾರದಂತೆ ಕಾನೂನಿನಡಿಯಲ್ಲಿ ತಾವು ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಇದೇ ವೇಳೆ ಪ್ರಧಾನ ಕಾರ್ಯದರ್ಶಿಗೆ ಕಿವಿ ಮಾತು ಹೇಳಿದರು.

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌  ಅನಾರೋಗ್ಯ  ಕಾರಣದಿಂದ  ತಮ್ಮ ಪದವಿಯಿಂದ ಹಿಂದೆ ಸರಿದಿದ್ದು ನೂತನವಾಗಿ ಜಯದೇವ್‌ ಅವರನ್ನು ನೇಮಕ ಮಾಡಲಾಗಿದೆ.

ಇದೇ ಕಾರ್ಯಕ್ರಮಲ್ಲಿ ಸದಸ್ಯತ್ವ ಪಡೆದವರಿಗೆ ಐಡಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ಸಂಘದ ಅಧ್ಯಕ್ಷ ಭೈರೇಗೌಡ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌, ಉಪಾಧ್ಯಕ್ಷ ಪ್ರಕಾಶ್‌, ನಿವೃತ್ತ ಡಿಟಿಒ ಹಾಗೂ ಸಂಘದ ಕಾರ್ಯಾಧ್ಯಕ್ಷ ವೇಣುಗೋಪಾಲ್‌, ನಿರ್ದೇಶಕರಾದ ಮುಂಜುನಾಥ್‌, ಮಹದೇವ್‌ ಇತರರು ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...