ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಆಕಸ್ಮಿಕವಾಗಿ ಸಂಭವಿಸಿದ ಅಪಘಾತದಿಂದ ಕಾರು ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅದಕ್ಕೆ ಹೆದರಿ KSRTC ಬಸ್ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಅಂದರೆ ಮೂರು ದಿನದ ಬಳಿಕ ಗೊತ್ತಾಗಿದೆ.
ಸಂಸ್ಥೆಯ ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದ ಚಾಲಕ ರಾಜೇಂದ್ರ (43) ಬಿಲ್ಲೆ ಸಂಖ್ಯೆ 156 ಆತ್ಮಹತ್ಯೆ ಮಾಡಿಕೊಂಡವರು. ಅಪಘಾತವಾಗಿರುವುದಕ್ಕೆ ಸಂಸ್ಥೆಯ ಕಾನೂನು ವಿಭಾಗದ ಅಧಿಕಾರಿಗಳು ಸ್ಪಂದಿಸದಿರುವುದಕ್ಕೆ ಹೆದರಿ ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಹೋದ್ಯೋಗಿಗಳು ಆರೋಪಿಸಿದ್ದಾರೆ.
ಮಾ.1ರಂದು ಶಿವರಾತ್ರಿ ಜಾತ್ರಾ ವಿಶೇಷ ವಾಹನ (ಸಂಖ್ಯೆ ಕೆಎ.09, ಎಫ್-5544) ವನ್ನು ಚಾಲಕ ರಾಜೇಂದ್ರ ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಕೆ.ಎಂ.ದೊಡ್ಡಿಯ ಬೋರಾಪುರ ಗೇಟ್ ಹತ್ತಿರ ಎದುರಿನಿಂದ ಬಂದ ಕಾರಿಗೆ ಡಿಕ್ಕಿಯಾಗಿತ್ತು. ಕಾರ್ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟರು.
ಇದರಿಂದ ಹೆದರಿ ರಾಜೇಂದ್ರ ಅವರು ಮನೆಗೆ ಹೋಗದೆ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು. ಅವರು ಎಲ್ಲೋ ಇರಬಹುದು ಅಂತ ಕುಟುಂಬದವರು ಹಾಗೂ ಸಹೋದ್ಯೋಗಿಗಳು ಅಂದುಕೊಂಡಿದ್ದರು. ಆದರೆ ಈ ದಿನ ಮೈಸೂರು ಬಳಿ ಇರುವ ವರುಣ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಮೃತ ರಾಜೇಂದ್ರ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ವಯಸ್ಸಾದ ತಂದೆಯನ್ನು ಅಗಲಿರುತ್ತಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೈಸೂರು ನಗರ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮ ವಹಿಸಿದ್ದಾರೆ.
ಈ ನಡುವೆ ಕರ್ನಾಟಕ ಸರ್ಕಾರದ ಸಾರಿಗೆ ನೌಕರರು ಈ ರೀತಿ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣ, ಆಕಸ್ಮಿಕವಾಗಿ ರಸ್ತೆ ಅಪಘಾತವಾದರೆ ಸಂಬಂಧಪಟ್ಟ ಸಂಸ್ಥೆ ಕಾನೂನು ವಿಭಾಗದ ಅಧಿಕಾರಿಗಳು ಕೂಡಲೇ ಚಾಲಕನಿಗೆ ಬೇಲ್ ರೆಡಿ ಮಾಡಿಕೊಂಡು ನ್ಯಾಯಾಲಯದಲ್ಲಿ ಅವರಿಗೆ ಜಾಮೀನು ನೀಡಿ ಬಿಡಿಸಬೇಕು.
ಆದರೆ, ಸಂಸ್ಥೆಯ ಕಾನೂನು ವಿಭಾಗದ ಅಧಿಕಾರಿಗಳು ಅಥವಾ ಸಂಸ್ಥೆಯ ವಕೀಲರು ಈ ಕೆಲಸವನ್ನು ಮಾಡುತ್ತಿಲ್ಲ. ಬದಲಿಗೆ ಚಾಲಕರ ವಿರುದ್ಧವೇ ಪ್ರಕರಣ ದಾಖಲಿಸುವ ಪ್ರವೃತ್ತಿ ಇದೆ. ಹೀಗಾಗಿ ಅಪಘಾತವಾದ ಮೇಲೆ ಚಾಲಕರ ಕುಟುಂಬದವರು ಖಾಸಗಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಹೋಗಿ ಚಾಲಕರನ್ನು ಬಿಡಿಸಿಕೊಂಡು ಬರಬೇಕು.
ಡ್ಯೂಟಿ ಮೇಲೆ ಆದ ಅಪಘಾತಕ್ಕೆ ಚಾಲಕರನ್ನು ಸಂಸ್ಥೆಯ ವಕೀಲರು ಬಲಿಪಶುಮಾಡುತ್ತಿರುವುದರಿಂದ ಕೆಲ ಚಾಲನಾ ಸಿಬ್ಬಂದಿಗಳು ಆರ್ಥಿಕವಾಗಿ ಸಬಲರಲ್ಲದ ಕಾರಣ ಖಾಸಗಿ ವಕೀಲರ ಮೂಲಕ ಕಾನೂನು ಹೋರಾಟ ಮಾಡುವುದು ಕಷ್ಟಕರವಾಗುತ್ತಿದೆ. ಈ ಕಾರಣಕ್ಕೆ ಕೆಲ ಚಾಲಕರು ಈ ರೀತಿ ಆತ್ಮಹತ್ಯೆಯಂತಹ ದಾರಿ ಹಿಡಿಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಇದು ಬದಲಾಗಬೇಕು. ಆಕಸ್ಮಿಕವಾಗಿ ಸಂಭವಿಸುವ ಅಪಘಾತಕ್ಕೆ ಸಂಸ್ಥೆಯ ವಕೀಲರು ನೌಕರರಿಗೆ ರಕ್ಷೆಯಾಗಿ ನಿಂತು ಅವರನ್ನು ಬಿಡಿಸಿಕೊಂಡು ಬರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದರೆ ಸಂಸ್ಥೆಯ ನೌಕರರು ಒತ್ತಡ ರಹಿತವಾಗಿ ಡ್ಯೂಟಿ ಮಾಡಲು ಸಾಧ್ಯವಾಗದೆ ರಾಜೇಂದ್ರ ಅವರ ರೀತಿ ಪ್ರಾಣ ಕಳೆದುಕೊಳ್ಳುತ್ತಾರೆ.
Related

You Might Also Like
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...