NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸುವ ಸಂಬಂಧ ಜ.17ರಂದು ಪೂರ್ವಭಾವಿ ಸಭೆ – ಸೂರ್ಯಸೇನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ಇದೇ ವರ್ಷದ ಜೂನ್ ವೇಳೆಗೆ ಸಂಚರಿಸಲಿದೆ ಎಂದು ಬಿಎಂಟಿಸಿ ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಎ.ಸೂರ್ಯಸೇನ್‌ ಮಾಹಿತಿ ನೀಡಿದ್ದಾರೆ.

ನಗರ ಭೂ ಸಾರಿಗೆ ಇಲಾಖೆ (DULT) ನಿಧಿಯ ಅಡಿಯಲ್ಲಿ ಐದು ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್ ಕರೆದಿದ್ದೇವೆ. ನಾವು ರಾಷ್ಟ್ರೀಯ ಕ್ಲೀನ್ ಏರ್ ಪ್ರೋಗ್ರಾಂ (NCAP) ಅಡಿಯಲ್ಲಿ ಅಂತಹ ಇನ್ನೊಂದು ಐದು ಬಸ್‌ಗಳನ್ನು ಖರೀದಿಸುತ್ತಿದ್ದೇವೆ ಎಂದು ಸೂರ್ಯಸೇನ್‌ ತಿಳಿಸಿದ್ದಾರೆ ಎಂದು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಇನ್ನು ಈ ವಿಚಾರವಾಗಿ ಜನವರಿ 17 ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದು ಸೂರ್ಯಸೇನ್‌ ಹೇಳಿದ್ದು, ಆ ಸಭೆಯ ನಂತರ ಸ್ಪಷ್ಟ ಚಿತ್ರಣ ಹೊರಬರಲಿದೆ. ನಾವು ಫೆಬ್ರವರಿ 15 ರೊಳಗೆ ಟೆಂಡರ್‌ಅನ್ನು ಅಂತಿಮಗೊಳಿಸಲು ಯೋಜಿಸುತ್ತಿದ್ದೇವೆ. ಮೊದಲ ಡಬಲ್ ಡೆಕ್ಕರ್ ಎಸಿ ಎಲೆಕ್ಟ್ರಿಕ್ ಬಸ್ ಅನ್ನು ಏಪ್ರಿಲ್ – ಜೂನ್ ನಡುವೆ ಪರಿಚಯಿಸಲಾಗುವುದು ಎಂದು ತಿಳಿಸಿದ್ದಾರೆ.

ಬಸ್‌ಗಳ ಉದ್ದವು 9,500 ಎಂಎಂ ಮತ್ತು 11,000 ಎಂಎಂ ನಡುವೆ ಇರುತ್ತದೆ. ಡಬ್ಬಲ್ ಡೆಕ್ಕರ್ ಡೀಸೆಲ್ ಬಸ್‌ಗಳು 1970-80ರ ದಶಕದಲ್ಲಿ ನಗರದಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿದ್ದವು. 1997ರ ವೇಳೆಗೆ ಅವುಗಳನ್ನು ಹಂತಹಂತವಾಗಿ ಸ್ಥಗಿತಗೊಳಿಸಲಾಗಿತ್ತು. ಮೊದಲ ಡಬಲ್ ಡೆಕ್ಕರ್ ಇ-ಬಸ್ ಹೊರ ವರ್ತುಲ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಈ ಬಸ್‌ಗಳು ಸುಮಾರು 70 ಪ್ರಯಾಣಿಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಮೊದಲ ಎಲೆಕ್ಟ್ರಿಕ್‌ ಡಬಲ್‌ ಡೆಕ್ಕರ್ ಬಸ್‌ ಅನ್ನು ಮುಂಬೈನಲ್ಲಿ ಆರಂಭಿಸಲಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದಕ್ಷಿಣ ಮುಂಬೈನ ವೈಬಿ ಸೆಂಟರ್‌ನಲ್ಲಿ ಭಾರತದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಅನ್ನು ಪ್ರಾರಂಭಿಸಿದರು. ಬಸ್‌ನ ಹೆಸರು ‘ಸ್ವಿಚ್ ಇಐವಿ 22’, ಡಬಲ್ ಡೆಕ್ಕರ್ ಬಸ್ ಅನ್ನು ಮುಂಬೈ ನಾಗರಿಕ ಸಾರಿಗೆ ಸಂಸ್ಥೆ ಸೆಪ್ಟೆಂಬರ್‌ನಿಂದಲೇ ಆರಂಭಿಸಿದೆ.

ಶೇ.35 ರಷ್ಟು ಮಾಲಿನ್ಯವು ಡೀಸೆಲ್ ಮತ್ತು ಪೆಟ್ರೋಲ್‌ನಿಂದ ಆಗಿದ್ದು, ಈ ಬಸ್‌ಗಳ ಅಳವಡಿಕೆಯಿಂದ ಮಾಲಿನ್ಯ ಕಡಿಮೆಯಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದ ಮೊದಲ ಹವಾನಿಯಂತ್ರಿತ ಡಬಲ್ ಡೆಕ್ಕರ್ ಬಸ್ ಸೇರಿದಂತೆ ಎರಡು ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೃಹತ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್‌ಪೋರ್ಟ್ (ಬೆಸ್ಟ್) ಇಲಾಖೆ ಅಡಿ ಬರಲಿವೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...