CrimeNEWSದೇಶ-ವಿದೇಶ

ಪ್ರಧಾನಿ ನರೇಂದ್ರ ಮೋದಿ ಜ.19ರಂದು ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್‌ನ ಗಾಜು ಜಖಂಗೊಳಿಸಿದ ಕಿಡಿಗೇಡಿಗಳು

ವಿಜಯಪಥ ಸಮಗ್ರ ಸುದ್ದಿ

ವಿಶಾಖಪಟ್ಟಣಂ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ನ ಎರಡು ಕಿಟಕಿಯ ಗಾಜುಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಬುಧವಾರ ಸಂಜೆ 6.30 ಕ್ಕೆ ವಿಶಾಖಪಟ್ಟಣಂನ ಕಂಚರಪಾಲೆಂ ಬಳಿ ರೈಲು ನಿರ್ವಹಣೆಗಾಗಿ ನಿಂತಿದ್ದಾಗ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಈ ಘಟನೆ ನಡೆದಿರುವುದು ಅತ್ಯಂತ ದುರದೃಷ್ಟಕರ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನುಪ್ ಕುಮಾರ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಇನ್ನು ಈ ರೈಲು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಚಲಿಸಲಿದೆ. ವಾರಂಗಲ್,  ಖಮ್ಮಂ, ವಿಜಯವಾಡ ಮತ್ತು ರಾಜಮಂಡ್ರಿಯಲ್ಲಿ ನಿಲುಗಡೆಯಿದೆ.

ಆದರೆ, ಚಾಲನೆಗೂ ಮುಂಚೆಯೇ ಈ ರೀತಿ ರೈಲನ್ನು ವಿರೂಪಗೊಳಿಸಿರುವುದು  ಅತ್ಯಂತ ನೋವಿನ ಸಂಗತಿ ಎಂದು ಬಿಜೆಪಿಯ ಮುಖಂಡರು ಹೇಳುತ್ತಿದ್ದು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...