NEWSನಮ್ಮರಾಜ್ಯ

ಪ್ರೇಮಕುಮಾರಿ ಪ್ರಕರಣ: ಇಂದು ಮಾಜಿ ಸಚಿವ ರಾಮದಾಸ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.

ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಂಕಜ್‌ ಮಿತ್ತಲ್‌, ಎಸ್‌.ವಿ.ಎನ್‌.ಭಟ್ಟಿ ಅವರನ್ನೊಳಗೊಂಡ  ದ್ವಿಸದ್ಯಪೀಠ​ ಇಂದು ವಜಾ ಮಾಡಿದೆ.

ತನ್ನನ್ನು ವಂಚಿಸಿದ್ದಾರೆಂದು ಪ್ರೇಮಕುಮಾರಿ ಅವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ನಂತರ ರಾಮದಾಸ್ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಇನ್ನು ಪ್ರೇಮ ಕುಮಾರಿ ಪರವಾಗಿ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಲಕಿಲರಾದ ಎಚ್‌.ಬಿ.ಶಿವರಾಜು, ರಾಮ್‌ ಲಾಲ್‌ಚೌದರಿ ವಾದ ಮಂಡಿಸಿದರು.

ಇನ್ನು ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಲಕಿಲ ಎಚ್‌.ಬಿ.ಶಿವರಾಜು ಅವರು ಈ ಪ್ರರಣದ ವಕಾಲತ್ತು ವಹಿಸಿದ್ದರು ಕೂಡ ಒಂದು ರೂಪಾಯಿಯನ್ನು ಸಹ ಸಂಭಾವನೆ ಪಡೆದಿಲ್ಲ ಎಂದು ಪ್ರೇಮ ಕುಮಾರಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ