NEWSನಮ್ಮರಾಜ್ಯಸಂಸ್ಕೃತಿ

ಮುಂಜಾನೆಯ ದಟ್ಟ ಮಂಜಿನ ನಡುವೆಯು ವಿಶ್ವದಾಖಲೆಗಾಗಿ ಯೋಗಾಯೋಗ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ/ಬೀದರ್‌ : ಮುಂಜಾನೆ ದಟ್ಟ ಮಂಜಿನ ನಡುವೆಯು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆ ಮಾಡಲು ಹೊರಟಿದ್ದಾರೆ.

ಹೌದು ಭಾನುವಾರ   ಬೆಳ್ಳಂಬೆಳಗ್ಗೆ ವಿಶ್ವದಾಖಲೆಗಾಗಿ 12 ಸಾವಿರ ವಿದ್ಯಾರ್ಥಿಗಳು ಏಕಕಾಲಕ್ಕೆ ಹಾವೇರಿಯ ಕ್ರೀಡಾಂಗಣದಲ್ಲಿ ದಟ್ಟವಾದ ಮಂಜಿನೊಂದಿಗೆಯೇ ಯೋಗಾಭ್ಯಾಸ ಮಾಡಿದ ದೃಶ್ಯ ನೋವುದಕ್ಕೂ ಮೈ ನವಿರೇಳಿಸುವಂತಿತ್ತು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್ ಕಾರ್ಯಕ್ರಮ ಆಯೋಜನೆಗೊಂಡಿತು. ದಟ್ಟವಾದ ಮಂಜಿನಲ್ಲೇ ಕುಳಿತು ಜಿಲ್ಲೆಯ ವಿವಿಧ ಶಾಲಾ – ಕಾಲೇಜುಗಳಿಂದ ಆಗಮಿಸಿದ್ದ 12 ಸಾವಿರ ವಿದ್ಯಾರ್ಥಿಗಳು ಯೋಗಾಥಾನ್‌ನಲ್ಲಿ ಭಾಗಿಯಾಗಿದ್ದರು.

ಆ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ  ಮೊಹಮ್ಮದ ರೋಷನ್, ಎಸ್ಪಿ ಹನುಮಂತರಾಯ, ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವ ನೀರಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಯೋಗಾಥಾನ್‌ನಲ್ಲಿ ಭಾಗವಹಿಸುವ ಮೂಲಕ ಸಾಥ್‌ ನೀಡಿದರು.

ಬೀದರ್‌ನಲ್ಲೂ 3 ಸಾವಿರಕ್ಕೂ ಜನ ಭಾಗಿ: ರಾಜ್ಯಾದ್ಯಂತ ಗಿನ್ನಿಸ್ ದಾಖಲೆಗಾಗಿ‌ ನಡೆಯುತ್ತಿರುವ ಯೋಗಾಥಾನ್ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಬೀದರ್‌ನಲ್ಲಿ 3 ಸಾವಿರಕ್ಕೂ ಹೆಚ್ಚು ಜನ ಏಕಕಾಲಕ್ಕೆ ಯೋಗದಲ್ಲಿ ಭಾಗಿಯಾದರು. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬೀದರ್ ನಗರದ ನೆಹರೂ ಸ್ಟೇಡಿಯಂನಲ್ಲಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.

ಯೋಗಾಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಚಾಲನೆ ನೀಡಿದ್ದು, ಎಸ್ಪಿ ಕಿಶೋರ್ ಬಾಬು, ಶಾಸಕ ರಹೀಂಖಾನ್, ಯೋಗಪಟುಗಳು, ಶಾಲಾ – ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ